ಮನೆ ಅಪರಾಧ ಉಡುಪಿ: ಇನ್​ ಸ್ಟಾಗ್ರಾಮ್ ​​ನಲ್ಲಿ ಪರಿಚಯವಾದ ಯುವತಿ ಅಪಹರಿಸಿ ಅತ್ಯಾಚಾರ

ಉಡುಪಿ: ಇನ್​ ಸ್ಟಾಗ್ರಾಮ್ ​​ನಲ್ಲಿ ಪರಿಚಯವಾದ ಯುವತಿ ಅಪಹರಿಸಿ ಅತ್ಯಾಚಾರ

0

ಉಡುಪಿ: ಇನ್ ​ಸ್ಟಾಗ್ರಾಮನಲ್ಲಿ ಪರಿಚಯವಾದ ಯುವಕನೋರ್ವ 21 ವರ್ಷದ ಯುವತಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿರುವ ಆರೋಪ ಪ್ರಕರಣ ಕಾರ್ಕಳ ಠಾಣೆಯಲ್ಲಿ ದಾಖಲಾಗಿದೆ.

Join Our Whatsapp Group

ಶುಕ್ರವಾರ ಸಂಜೆ 7 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಯುವತಿಯನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಅಲ್ತಾಫ್​ನನ್ನು ಬಂಧಿಸಿ, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇನ್ನು ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಕೆ.ಅರುಣ್ ಕುಮಾರ್ ಮಾತನಾಡಿ, ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ದೂರು ಬಂದಿದೆ. ಸಂತ್ರಸ್ತೆಗೆ ಆರೋಪಿ ಮೂರು ತಿಂಗಳಿಂದ ಪರಿಚಯವಿತ್ತು. ಇನ್ಸ್ಟಾಗ್ರಾಮ್ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು. ಶುಕ್ರವಾರ ಆರೋಪಿ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಯುವತಿ ಬಂದಾಗ ಅಲ್ಲಿಂದ ಅಪಹರಿಸಿದ್ದ. ಬಳಿಕ ಮಾರ್ಗ ಮಧ್ಯದಲ್ಲಿ ದ್ರವ ರೂಪದ ವಸ್ತುವಿನಲ್ಲಿ ಅಮಲು ಪದಾರ್ಥ ಬೆರೆಸಿ ಅತ್ಯಾಚಾರ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅಲ್ತಾಫ್ ​ನನ್ನು ಬಂಧಿಸಲಾಗಿದೆ. ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ವಾಹನ ಸೀಜ್ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದರು.