ಮನೆ ರಾಜ್ಯ ರಾಜ್ಯದಲ್ಲಿ 153 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 153 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru)- ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 153 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,51,131ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಇಂದು ಯಾವುದೇ ಸಾವು ಸಂಭವಿಸಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40064 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
175 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,09248ಕ್ಕೆ ಏರಿಕೆಯಾಗಿದೆ. ಇನ್ನು 1777 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 142 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,86,812ಕ್ಕೆ ಏರಿಕೆಯಾಗಿದೆ.