ಜಮ್ಮು ಕಾಶ್ಮೀರ: ಮುಂದಿನ ತಿಂಗಳು ಜಮ್ಮು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭಾ ಚುಣಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ, ಹಿಂಪಡೆದಿದೆ.ತಿದ್ದುಪಡಿಗಳ ನಂತರ ಶೀಘ್ರದಲ್ಲೇ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಒಟ್ಟು 90 ವಿಧಾನಸಭಾ ಸ್ಥಾನಗಳಿದ್ದು, ಮೂರು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಮೊದಲ ಹಂತದಲ್ಲಿ ಸೆಪ್ಟೆಂಬರ್ 18 ರಂದು 24 ಸ್ಥಾನಗಳಿಗೆ ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ ಸೆಪ್ಟೆಂಬರ್ 25 ರಂದು 26 ಸ್ಥಾನಗಳಿಗೆ ಮತದಾನ ನಡೆಯಲಿದೆ. ಮೂರನೇ ಹಂತದಲ್ಲಿ ಅಕ್ಟೋಬರ್ 1 ರಂದು 40 ಸ್ಥಾನಗಳಿಗೆ ಮತದಾನ ನಡೆಯಲಿದೆ. ಅಕ್ಟೋಬರ್ 4 ರಂದು ಹರಿಯಾಣ ಜೊತೆಗೆ ಮತ ಎಣಿಕೆ ನಡೆಯಲಿದೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ಇದಕ್ಕೂ ಮುನ್ನ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದ್ದು, ಮೊದಲ ಹಂತದ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಬಿಜೆಪಿ ಮೂಲಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ 90 ಸ್ಥಾನಗಳಲ್ಲಿ ಹೆಚ್ಚಿನ ಅಭ್ಯರ್ಥಿಗಳನ್ನು ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಇನ್ನೂ ಕೆಲವು ಸ್ಥಾನಗಳಲ್ಲಿ ಒಮ್ಮತ ಮೂಡಿಲ್ಲ. ಇದೀಗ ಆಗಸ್ಟ್ 29 ರಂದು ದೆಹಲಿಯಲ್ಲಿ ಮತ್ತೊಮ್ಮೆ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ನಂತರ ಉಳಿದ ಹೆಸರುಗಳಿಗೂ ಅನುಮೋದನೆ ದೊರೆಯಲಿದೆ.