ಮನೆ ಅಪರಾಧ ರಸ್ತೆ ಬದಿಯಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್: ಮೂವರು ಸ್ಥಳದಲ್ಲೇ ಸಾವು

ರಸ್ತೆ ಬದಿಯಲ್ಲಿ ಮಲಗಿದ್ದವರ ಮೇಲೆ ಹರಿದ ಟ್ರಕ್: ಮೂವರು ಸ್ಥಳದಲ್ಲೇ ಸಾವು

0

ನವದೆಹಲಿ: ದೆಹಲಿಯ ಶಾಸ್ತ್ರಿನಗರ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Join Our Whatsapp Group

ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿರುವ ತರ್ಬುಜ್ ಮಾರುಕಟ್ಟೆಯಲ್ಲಿ ಅಪಘಾತ ಸಂಭವಿಸಿರುವ ಕುರಿತು ಮುಂಜಾನೆ 4.56ಕ್ಕೆ ದೂರವಾಣಿ ಕರೆ ಬಂದಿತ್ತು. ಸೀಲಾಂಪುರದಿಂದ ಬರುತ್ತಿದ್ದ ಟ್ರಕ್ ಮಲಗಿದ್ದ ಐವರ ಮೇಲೆ ಹರಿದಿದೆ. ಘಟನೆ ಬಳಿಕ ಚಾಲಕ ಟ್ರಕ್ ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ಈಶಾನ್ಯ ದೆಹಲಿಯ ಡಿಸಿಪಿ ಡಾ ಜಾಯ್ ಟಿರ್ಕಿ ತಿಳಿಸಿದ್ದಾರೆ.

ಮೃತರ ಗುರುತು ಪತ್ತೆ ಹಚ್ಚಲು ಪ್ರಯತ್ನಿಸಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ಮುಸ್ತಾಕ್ ಮತ್ತು ಕಮಲೇಶ್‌ರನ್ನು ಜೆಪಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಘಟನೆ ಸಂಬಂಧ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.