ಮನೆ ರಾಜ್ಯ ಅರ್ಹತೆ ಇಲ್ಲದ ಸಂಸ್ಥೆಗೆ ಬೃಹತ್ ಕಾಮಗಾರಿ ಗುತ್ತಿಗೆ ನೀಡಿದ ಬಿಬಿಎಂಪಿ: ಕ್ರಿಮಿನಲ್ ಪ್ರಕರಣ ದಾಖಲಿಸುವ ಎಚ್ಚರಿಕೆ

ಅರ್ಹತೆ ಇಲ್ಲದ ಸಂಸ್ಥೆಗೆ ಬೃಹತ್ ಕಾಮಗಾರಿ ಗುತ್ತಿಗೆ ನೀಡಿದ ಬಿಬಿಎಂಪಿ: ಕ್ರಿಮಿನಲ್ ಪ್ರಕರಣ ದಾಖಲಿಸುವ ಎಚ್ಚರಿಕೆ

0

ಬೆಂಗಳೂರು: ಅರ್ಹತೆಯೇ ಇಲ್ಲದ ಪೂರ್ವ ನಿಗಧಿತ ಗುತ್ತಿಗೆದಾರರಿಗೆ ₹ 380 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಯ ಗುತ್ತಿಗೆಯನ್ನು ಕಾನೂನು ಬಾಹಿರವಾಗಿ ಬಿಬಿಎಂಪಿಯ ಹಿರಿಯ ಅಧಿಕಾರಿಗಳು ನೀಡುತ್ತಿದ್ದಾರೆ ಎಂದು ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಮಾಜಿ ಅಧ್ಯಕ್ಷರು ರಮೇಶ್ ಎನ್. ಆರ್. ಆರೋಪಿಸಿದ್ದಾರೆ.

Join Our Whatsapp Group

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಬೈಯ್ಯಪ್ಪನಹಳ್ಳಿ ಜಂಕ್ಷನ್ ಬಳಿ ನಿರ್ಮಿಸಲು ಉದ್ದೇಶಿಸಿರುವ 04 ಕಿ. ಮೀ. ಉದ್ದದ ಎಲಿವೇಟೆಡ್ ಕಾರಿಡಾರ್ ರಸ್ತೆ (Flyover) ನಿರ್ಮಾಣಕ್ಕೆ  ಸಂಬಂಧಿಸಿದಂತೆ ಸುಮಾರು ₹ 380 ಕೋಟಿ ರೂಪಾಯಿಗಳಷ್ಟು ಹಣವನ್ನು ಪಾಲಿಕೆಯು ವೆಚ್ಛ ಮಾಡುತ್ತಿದೆ.  ಈ ಸಂಬಂಧ ಈ ಹಿಂದೆ ಆಹ್ವಾನಿಸಲಾಗಿದ್ದ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ RNS Construction ಸಂಸ್ಥೆಯವರು ಕಾನೂನು ರೀತ್ಯಾ ಅರ್ಹತೆಯನ್ನು ಪಡೆದಿದ್ದರೂ ಸಹ ಅವರನ್ನು ಟೆಂಡರ್ ಪ್ರಕ್ರಿಯೆಯಿಂದ ಹಿಂದೆ ಸರಿಯುವಂತೆ ಮಾಡಿ ಕೇವಲ ಬೆಂಗಳೂರು ಮಹಾನಗರ ಮಾತ್ರವಲ್ಲದೇ ದೇಶದ ಯಾವುದೇ ಭಾಗದಲ್ಲಿ ಒಂದು ಇಂಚಿನಷ್ಟೂ ಎಲಿವೇಟೆಡ್ ಕಾರಿಡಾರ್ ರಸ್ತೆ ಅಥವಾ Flyover ಕಾಮಗಾರಿಯನ್ನು ನಿರ್ವಹಿಸಿರುವ ಅನುಭವವೇ ಇಲ್ಲದಂತಹ ಮತ್ತು ಕೇವಲ Concrete ರಸ್ತೆಗಳನ್ನು ಮಾತ್ರವೇ ನಿರ್ಮಿಸಿರುವಂತಹ Star Infra tech ಎಂಬ ಸಂಸ್ಥೆಗೆ ಇಷ್ಟು ಬೃಹತ್ ಮೊತ್ತದ ಕಾಮಗಾರಿಯನ್ನು ನೀಡಲು ಹೊರಟಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ಅನುಭವದ ಪ್ರಮಾಣ ಪತ್ರವನ್ನು ಹಾಗೂ ಈ ಹಿಂದೆ ಅವರು ಅದೇ ಮಾದರಿಯ ಕಾಮಗಾರಿಯನ್ನು ನಿರ್ವಹಿಸಿರುವ ಪ್ರಮಾಣ ಪತ್ರವನ್ನು ಸಲ್ಲಿಸದ  Star Infra tech ಎಂಬ ಸಂಸ್ಥೆಗೆ  ಬೃಹತ್ ಪ್ರಮಾಣದ ಗುತ್ತಿಗೆಯನ್ನು ಕೊಡಲು ಹೊರಟಿರುವ ಇದರ ಹಿಂದಿನ ಮರ್ಮವೇನು ? ಇದರ ಹಿಂದೆ ಇರುವ ಪ್ರಭಾವಿಗಳು ಯಾರು ? ಎಂದು ರಮೇಶ್ ಎನ್. ಆರ್ ಪ್ರಶ್ನಿಸಿದ್ದಾರೆ.

ಒಂದು ವೇಳೆ ಕಾನೂನಿನ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಿ  Star Infar tech ಸಂಸ್ಥೆಗೆ ಸದರಿ  ಕಾಮಗಾರಿಯ ಗುತ್ತಿಗೆಯನ್ನು ನೀಡಿದರೆ ಪಾಲಿಕೆಯ ಮುಖ್ಯ ಆಯುಕ್ತರು ಮತ್ತು ‌ಆಡಳಿತಾಧಿಕಾರಿಗಳ ವಿರುದ್ಧ ಕಾನೂನು ರೀತ್ಯಾ ತನಿಖಾ ಸಂಸ್ಥೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಬೇಕಾಗುತ್ತದೆ. ಮತ್ತು ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಈ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಬೇಕಾಗುತ್ತದೆ ಪಾಲಿಕೆಯ ಮುಖ್ಯ ಆಯುಕ್ತರು ಹಾಗೂ ಆಡಳಿತಾಧಿಕಾರಿಗಳಿಗೆ ರಮೇಶ್ ಎನ್. ಆರ್ ಎಚ್ಚರಿಕೆ ನೀಡಿದ್ದಾರೆ.