ಸೂರತ್: ಗುಜರಾತ್‌ನ ವಿವಿಧ ಜಿಲ್ಲೆಗಳಲ್ಲಿ, ವಿಶೇಷವಾಗಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕನಿಷ್ಠ 15 ಜನರು ಸಾವನ್ನಪ್ಪಿದ್ದು, 23,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. ಅಪಾಯಕ್ಕೆ ಸಿಲುಕಿದ್ದ 300 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.
ಮಂಗಳವಾರ ಮಳೆಯ ತೀವ್ರತೆ ಕಡಿಮೆಯಾಗಿದ್ದರೂ, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಿದೆ.
ಪಾರುಗಾಣಿಕಾ ಮತ್ತು ಪರಿಹಾರ ಕಾರ್ಯಾಚರಣೆಗಳ ವೇಗ ಹೆಚ್ಚಿಸಲು, ಗುಜರಾತ್ ಸರಕಾರ ಭಾರತೀಯ ಸೇನೆಯ ನೆರವು ಕೋರಿದೆ. ದ್ವಾರಕಾ, ಆನಂದ್, ವಡೋದರಾ, ಖೇಡಾ, ಮೊರ್ಬಿ ಮತ್ತು ರಾಜ್‌ಕೋಟ್ ಜಿಲ್ಲೆಗಳಲ್ಲಿ ವ್ಯಾಪಕ ಹಾನಿ ಸಂಭವಿಸಿದೆ.
ವಿಪತ್ತು ನಿರ್ವಹಣೆಯ ಪ್ರಯತ್ನಕ್ಕೆ 14 NDRF (ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ) ತುಕಡಿಗಳು ಮತ್ತು SDRF ನ ತಂಡಗಳನ್ನು ಈಗಾಗಲೇ ನಿಯೋಜಿಸಲಾಗಿದೆ.
ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಮಂಗಳವಾರ ಪರಿಹಾರ ಮತ್ತು ರಕ್ಷಣ ಕಾರ್ಯಾಚರಣೆಗಳನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯನ್ನೂ ನಡೆಸಿದ್ದಾರೆ.