ಮನೆ ಕಾನೂನು ಎಚ್ ​ಡಿ ರೇವಣ್ಣ ಜಾಮೀನು ರದ್ದು ಕೋರಿ ಎಸ್ಐಟಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಎಚ್ ​ಡಿ ರೇವಣ್ಣ ಜಾಮೀನು ರದ್ದು ಕೋರಿ ಎಸ್ಐಟಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

0

ಬೆಂಗಳೂರು: ಮೈಸೂರು ಜಿಲ್ಲೆ ಕೆ.ಆರ್.‌ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್ ​ಡಿ ರೇವಣ್ಣ ನೀಡಿರುವ ಜಾಮೀನು ರದ್ದು ಕೋರಿ SIT ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

Join Our Whatsapp Group

ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಅಪಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ಕೋರ್ಟ್​ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಎಸ್​​ಐಟಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಆದ್ರೆ, ಹೈಕೋರ್ಟ್​ ಇಂದು (ಆಗಸ್ಟ್ 28) ಎಸ್​ಐಟಿ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಇನ್ನು ಇದೇ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿದೆ. ಸತೀಶ್ ಬಾಬು, ಮಧುಗೌಡ, ಕೆ.ಎ.ರಾಜಗೋಪಾಲ್, ಹೆಚ್.ಕೆ.ಸುಜಯ್, ಹೆಚ್.ಎನ್.ಮಧು, ಎಸ್.ಟಿ.ಕೀರ್ತಿಗೆ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನರಿದ್ದ ಪೀಠ ಆದೇಶ ಹೊರಡಿಸಿದೆ.