ಬೆಂಗಳೂರು: ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆಗಿ ಗುರುತಿಸಿಕೊಂಡಿರುವ ಇಂಡಿಯನ್ ಓವರ್ ಸೀಸ್ ಬ್ಯಾಂಕ್ನಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಒಂದು ವರ್ಷದ ಅವಧಿಗೆ ಈ ಹುದ್ದೆ ನೇಮಕಾತಿ ಮಾಡಲಾಗುವುದು. ಈ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಗೌರವಧನದ ಮಾಸಿಕ ವೇತನವನ್ನು ನೀಡಲಾಗುತ್ತದೆ.
ಹುದ್ದೆ ವಿವರ: ಒಟ್ಟು 550 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ವಿವಿಧ ರಾಜ್ಯಗಳಲ್ಲಿ ಹುದ್ದೆ ಹಂಚಿಕೆಯಾಗಿದ್ದು, ಅದರಲ್ಲಿ 50 ಹುದ್ದೆಗಳನ್ನು ಕರ್ನಾಟಕಕ್ಕೆ ಮೀಸಲಿರಿಸಲಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿ ಕನಿಷ್ಠ ವಯಸ್ಸು 20, ಗರಿಷ್ಠ ವಯೋಮಿತಿ 28ವರ್ಷವಾಗಿದೆ. ಪ. ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸಾಮಾನ್ಯ, ಒಬಿಸಿ ಮತ್ತು ಆರ್ಥಿಕ ಹಿಂದುಳಿದ ಅಭ್ಯರ್ಥಿಗಳಿಗೆ 944 ರೂ, ಪ.ಜಾ. ಪ. ಪಂ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 708 ರೂ. ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 472 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.
ಅಭ್ಯರ್ಥಿಗಳನ್ನು ಈ ಹುದ್ದೆಗೆ ಆನ್ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗೆ ಆಗಸ್ಟ್ 28ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 15 ಆಗಿದೆ. ಸೆಪ್ಟೆಂಬರ್ 22ರಂದು ಆನ್ಲೈನ್ ಪರೀಕ್ಷೆ ನಡೆಯಲಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು iob.in ಭೇಟಿ ನೀಡಬಹುದು.
ಯೂನಿಯನ್ ಬ್ಯಾಂಕ್ನಲ್ಲಿ ನೇಮಕಾತಿ: ಯೂನಿಯನ್ ಬ್ಯಾಂಕ್ನಲ್ಲೂ ಒಂದು ವರ್ಷದ ಅವಧಿಗೆ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 500 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಕರ್ನಾಟಕದಲ್ಲಿ 40 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ವಿದ್ಯಾರ್ಹತೆ: ಅಭ್ಯರ್ತಿಗಳು ಯಾವುದೇ ವಿಷಯದಲ್ಲಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರ್ಣಗೊಳಿಸಿರುಬೇಕು.
ವಯೋಮಿತಿ: ಅಭ್ಯರ್ಥಿ ಕನಿಷ್ಠ ವಯಸ್ಸು 20, ಗರಿಷ್ಠ ವಯೋಮಿತಿ 28ವರ್ಷವಾಗಿದೆ. ಪ. ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 15 ಸಾವಿರ ಗೌರವ ಧನ ನೀಡಲಾಗುವುದು.
ಈ ಹುದ್ದೆಗೆ ಆಗಸ್ಟ್ 28ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೇಯ ದಿನಾಂಕ ಸೆಪ್ಟೆಂಬರ್ 17 ಆಗಿದೆ. ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಕೆಗೆ ಮುನ್ನ ಸರ್ಕಾರದ apprenticeshipindia.gov.in ಅಥವಾ nats.education.gov.in ಇಲ್ಲಿ ನೋಂದಣಿ ಮಾಡಬೇಕಿದೆ.
ಈ ಕುರಿತ ಹೆಚ್ಚಿನ ಮಾಹಿತಿಗೆ unionbankofindia.co.in ಇಲ್ಲಿಗೆ ಭೇಟಿ ನೀಡಿ
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.