ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ಸೆ.೫ ಕ್ಕೆ ಮುಂದೂಡಿದೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿರುವ ಮತ್ತು ಬೆಂಗಳೂರು ಸೈಬರ್ ಅಪರಾಧ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠಕ್ಕೆ ಜಾಮೀನು ಹಾಗೂ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮುಂದೂಡಿದೆ.
ಅರ್ಜಿದಾರರ ಪರವಾಗಿ ಹಾಜರಾಗಿದ್ದ ವಕೀಲ ಜಿ.ಅರುಣ್, ಎಸ್‌ಐಟಿಯು ಸಂಬಂಧಿತ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದು, ಇದೀಗ ಮತ್ತೊಮ್ಮೆ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆ.೫ ಕ್ಕೆ ಮುಂದೂಡಿದೆ.