ಹನೂರು: ತಾಲೂಕಿನ ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯದ ಆಳದ ಕೆರೆ ಅರಣ್ಯ ಪ್ರದೇಶದಲ್ಲಿ ಆನೆಯ ಎರಡು ದಂತ ಸಹಿತ ತಲೆಬುರುಡೆ ಮತ್ತು ಮೂಳೆಗಳು ಪತ್ತೆಯಾಗಿದೆ.
ಈ ಸಂಬಂಧ ವಲಯ ಅರಣ್ಯಾಧಿಕಾರಿಗಳು ಗಸ್ತುನೆಡೆಸುತ್ತಿರುವ ಈಬಗ್ಗೆ ಮಾಹಿತಿ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಿರೇಲಾಲ್ , ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ ವಲಯ ಅರಣ್ಯಾಧಿಕಾರಿ ಪ್ರಮೋದ್ ನೇತ್ರತ್ವದ ತಂಡ ಭೇಟಿ ನೀಡಿ ಪ್ರಾಥಮಿಕ ಪರಿಶೀಲನೆ ನಡೆಸಿದ್ದಾರೆ.
ಗಂಡಾನೆಯು ಸುಮಾರು 07 ರಿಂದ 08 ತಿಂಗಳ ಹಿಂದೆ ಸ್ವಾಭಾವಿಕವಾಗಿ ಮೃತಪಟ್ಟಿರುವುದು ಮೇಲ್ನೋಟಕ್ಕೆ ಕಂಡುಬಂದಿರುತ್ತದೆ. ಹಾಗೂ ಗಂಡಾನೆಯ 02 ದಂತಗಳು ಸುರಕ್ಷಿತವಾಗಿರುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.