ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ/ ಅತಿಥಿ ಉಪನ್ಯಾಸಕರ ಭರ್ತಿಗೆ ಕಾಲೇಜು ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದೆ. ಖಾಯಂ ಉಪನ್ಯಾಸಕರಿಗೆ ಹಂಚಿಕೆಯಾಗಿ ಉಳಿದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲಾಗುವುದು.
ಹುದ್ದೆ ವಿವರ: ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಬೋಧಕರು ಸೇರಿದಂತೆ ವಿವಿಧ ವಿಷಯ ಬೋಧನೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ನಡೆಸಲಾಗುವುದು.
ವಿದ್ಯಾರ್ಹತೆ: ಅಭ್ಯರ್ಥಿಗಳು ಎರಡು ವರ್ಷದ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಪಿಹೆಚ್ಡಿ ವಿದ್ಯಾರ್ಹತೆ ಅಥವಾ ಎನ್ಇಟಿ, ಕೆ-ಸೆಟ್, ಎಸ್ ಎಸ್ ಎಲ್ ಇಟಿ ವಿದ್ಯಾರ್ಹತೆ, ಎಂಫಿಲ್ ವಿದ್ಯಾರ್ಹತೆ ಪಡೆದವರಿಗೆ ಹೆಚ್ಚಿನ ಅವಕಾಶ ಲಭ್ಯವಿದೆ.
ಅನುಭವ: ಅಭ್ಯರ್ಥಿಗಳು ಈಗಾಗಲೇ ಹಿಂದಿನ ವರ್ಷಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಮತ್ತು ಕೌನ್ಸಿಲಿಂಗ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ವೇತನ: 5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ, ಯುಜಿಸಿ ವಿದ್ಯಾರ್ಹತೆ ಹೊಂದಿದವರಿಗೆ 39 ಸಾವಿರ ರೂ.
5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿದವರಿಗೆ 38 ಸಾವಿರ ರೂ.
5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸದ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ 31 ಸಾವಿರ ರೂ. ವೇತನ ನಿಗದಿಸಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಗಸ್ಟ್ 31ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್ 7 ಆಗಿದೆ. ತಾತ್ಕಾಲಿಕ ಮೆರಿಟ್ ಪಟ್ಟಿ ಸೆಪ್ಟೆಂಬರ್ 8ರಂದು ಬಿಡುಗಡೆಯಾಗುವ ನಿರೀಕ್ಷೆ ಇದೆ.
ಅರ್ಜಿ ಸಲ್ಲಿಕೆ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗಳಿಗೆ ಅಭ್ಯರ್ಥಿಗಳು dce.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.