ಮನೆ ರಾಷ್ಟ್ರೀಯ ಬಜರಂಗ್ ಪುನಿಯಾ, ವಿನೇಶ್ ಫೋಗಟ್ ರನ್ನು ಭೇಟಿಯಾದ ರಾಹುಲ್ ಗಾಂಧಿ

ಬಜರಂಗ್ ಪುನಿಯಾ, ವಿನೇಶ್ ಫೋಗಟ್ ರನ್ನು ಭೇಟಿಯಾದ ರಾಹುಲ್ ಗಾಂಧಿ

0

ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಇಬ್ಬರು ತಾರಾ ಕುಸ್ತಿಪಟುಗಳನ್ನು ಕಣಕ್ಕಿಳಿಸಬಹುದು ಎನ್ನುವ ಊಹಾಪೋಹಗಳ ನಡುವೆ ರಾಹುಲ್‌ ಗಾಂಧಿಯವರು ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಅವರನ್ನು ಭೇಟಿಯಾಗಿದ್ದಾರೆ.

Join Our Whatsapp Group

 ಈ ಭೇಟಿಯಿಂದಾಗಿ ಊಹೆಗೆ ಇನ್ನಷ್ಟು ಪುಷ್ಟಿ ಸಿಕ್ಕಿದೆ. ಈ ನಡುವೆ ಪುನಿಯಾ ಮತ್ತು ಫೋಗಟ್ ಕಣಕ್ಕಿಳಿಯಬಹುದೇ ಎಂಬ ಬಗ್ಗೆ ಗುರುವಾರದ ವೇಳೆಗೆ ಸ್ಪಷ್ಟತೆ ದೊರೆಯಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ, ಹರಿಯಾಣ ಉಸ್ತುವಾರಿ ದೀಪಕ್ ಬಬಾರಿಯಾ ಮಂಗಳವಾರ ಹೇಳಿದ್ದರು.

ಕಾಂಗ್ರೆಸ್‌ ತನ್ನ ಎಕ್ಸ್‌ ಖಾತೆಯಲ್ಲಿ ರಾಹುಲ್‌ ಅವರು ವಿನೇಶ್‌ ಮತ್ತು ಪೂನಿಯಾ ಅವರನ್ನು ಭೇಟಿಯಾದ ಫೋಟೊ ಹಂಚಿಕೊಂಡಿದೆ.

ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಸಮಿತಿಯು ಮಂಗಳವಾರದವರೆಗೆ 90 ಸ್ಥಾನಗಳ ಪೈಕಿ 66 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಇನ್ನೆರಡು ದಿನಗಳಲ್ಲಿ ಉಳಿದ ಸ್ಥಾನಗಳಿಗೆ ಅಭ್ಯರ್ಥಿಯ ಹೆಸರನ್ನು ಘೋಷಿಸಲಿದೆ ಎಂದು ಹೇಳಲಾಗಿದೆ.

ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 5 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ.

2023ರಲ್ಲಿ ಬಿಜೆಪಿಯ ಮಾಜಿ ಸಂಸದ ಮತ್ತು ಆಗಿನ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿ ನಡೆಸಿದ ಪ್ರತಿಭಟನೆಯಲ್ಲಿ ಪುನಿಯಾ ಮತ್ತು ಫೋಗಟ್ ಭಾಗಿಯಾಗಿದ್ದರು.