ಮನೆ ಕಾನೂನು ಇನ್ಮುಂದೆ ವಾಹನಗಳ ಮೇಲೆ ಅನಧಿಕೃತ ಬರಹ ಹಾಕಿದರೆ ಕಠಿಣ ಕ್ರಮ

ಇನ್ಮುಂದೆ ವಾಹನಗಳ ಮೇಲೆ ಅನಧಿಕೃತ ಬರಹ ಹಾಕಿದರೆ ಕಠಿಣ ಕ್ರಮ

0

ಬೆಂಗಳೂರು: ಕೊಲೆ ಆರೋಪಿ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆದ್ಮೇಲೆ ಅವರ ಅಭಿಮಾನಿಗಳು ವಾಹನಗಳ ಮೇಲೆ ತರಹೇವಾರಿ ಬರಹ ಬರೆದು ಅಂಧಾಭಿಮಾನ ಮೆರೆಯುತ್ತಿದ್ದಾರೆ. ದರ್ಶನ್‌ಗೆ ನೀಡಿರುವ ಕೈದಿ ಸಂಖ್ಯೆ, ಸೇರಿದಂತೆ ವಾಹನಗಳ ಮೇಲೆ ಪ್ರಚೋದನಕಾರಿ, ಬೇರೆ ನಟರ ಫ್ಯಾನ್ಸ್‌ಗೆ ಟಾಂಗ್ ಕೊಡುವಂತ ಬರಹಗಳ ಸ್ಟಿಕರ್‌ ಅಳವಡಿಸಿಕೊಂಡಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಈ ಬಗ್ಗೆ ನಿಗಾ ವಹಿಸಿರುವ ಪೊಲೀಸರು ಹಾಗೂ ಆರ್‌ಟಿಒ ಇಲಾಖೆ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದು, ದರ್ಶನ್‌ ಅಭಿಮಾನಿಗಳಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.

Join Our Whatsapp Group

ಇತ್ತೀಚಿನ ದಿನಗಳಲ್ಲಿ ವಾಹನಗಳ ಮೇಲೆ ಬೇರೆ ಬೇರೆ ರೀತಿಯ ಬರಹಗಳನ್ನು ಅಳವಡಿಸಿಕೊಳ್ಳುವುದು ಹೆಚ್ಚಾಗಿ ಕಂಡುಬರುತ್ತಿದೆ. ಈ ಹಿಂದೆ ಈ ಮಟ್ಟಿಗೆ ಬರಹಗಳನ್ನ ವಾಹನಗಳ ಮೇಲೆ ಹಾಕಿರಲಿಲ್ಲ. ಈ ಬಗ್ಗೆ ಆರ್‌ಟಿಒ ಇಲಾಖೆ ಹಾಗೂ ಪೊಲೀಸ್ ಇಲಾಖೆ ಗಮನಕ್ಕೆ ಬಂದಿದ್ದು, ಅನವಶ್ಯಕ ಬರಹಗಳು ಕಂಡುಬಂದಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ನೆಚ್ಚಿನ ನಟರ ಫೋಟೋಗಳನ್ನ ವಾಹನಗಳ ಮೇಲೆ ಹಾಕೋದು ಕಾನೂನು ಬಾಹಿರ ಎಂದು ಹೆಚ್ಚುವರಿ ಸಾರಿಗೆ ಆಯುಕ್ತ ಸಿ. ಮಲ್ಲಿಕಾರ್ಜುನ್ ಎಚ್ಚರಿಸಿದ್ದಾರೆ.

ಇಲ್ಲಿವರೆಗೆ ನಂಬರ್ ಪ್ಲೇಟ್ ಮೇಲೆ ಫೋಕಸ್ ಮಾಡ್ತಿದ್ವಿ. ಆದ್ರೆ ಕಾನೂನು ಪ್ರಕಾರ ಪ್ರಚೋದನೆ ಮಾಡುವ ಬರಹ ಮಾತ್ರವಲ್ಲ, ಯಾವುದೇ ಸ್ಟಿಕ್ಕರ್‌ಗಳಿಗೂ ಅವಕಾಶವಿಲ್ಲ. ಹಾಗಾಗಿ ಇನ್ಮುಂದೆ ಅನಧಿಕೃತ ಬರಹ ಹಾಕಿದರೆ, ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತೆ. ಒಂದು, ಎರಡು ಬಾರಿ ಎಚ್ಚರಿಕೆ ಕೊಡ್ತೀವಿ. 3ನೇ ಬಾರಿ ಅದೇ ತಪ್ಪು ಮಾಡಿದ್ರೆ ಲೈಸೆನ್ಸ್ ರದ್ದು ಮಾಡುತ್ತೇವೆ ಎಂದು ಮಲ್ಲಿಕಾರ್ಜುನ್‌ ಅವರು ಎಚ್ಚರಿಕೆ ನೀಡಿದ್ದಾರೆ.

ನಂಬರ್ ಪ್ಲೇಟ್ ಯಾವ ರೀತಿ ಇರಬೇಕು ಎಂದು ಸುಪ್ರೀಂ ಕೋರ್ಟ್‌ ಆರ್‌ಟಿಒ ಇಲಾಖೆಗಳಿಗೆ ನಿರ್ದೇಶನ ಕೊಟ್ಟಿದೆ. ಅದರ ಅನ್ವಯವೇ ಅಧಿಕಾರಿಗಳು ಕೇಸು ದಾಖಲು ಮಾಡುತ್ತಾ ಬಂದಿದ್ದಾರೆ. ಈ ಬಗ್ಗೆ ಜನರಿಗೆ ಅರಿವು ಮೂಡಿಸುವ ಹಾಗೂ ಪ್ರಚಾರ ಮಾಡುವ ಕೆಲಸ ಆರ್‌ಟಿಒ ಇಲಾಖೆ ಮಾಡಿದೆ.

ಕಳೆದ 3 ವರ್ಷಗಳಲ್ಲಿ ಈ ಸಂಬಂಧ ಹಲವು ಪ್ರಕರಣ ದಾಖಲು ಮಾಡಿದ್ದೇವೆ. ವಾಹನಗಳ ಮೇಲೆ ಬೇರೆ ಬೇರೆ ಬರಹಗಳನ್ನ ಬರೆಯುತ್ತಿದ್ದಾರೆ. ಯಾರೂ ಸಹ ಅನಾವಶ್ಯಕ ಬರಹಗಳನ್ನ ವಾಹನಗಳ ಮೇಲೆ ಹಾಕಬಾರದು. ಇಲ್ಲ ನಮ್ಮ ಕಠಿಣ ಕ್ರಮ ಗ್ಯಾರಂಟಿ ಎಂದು ಎಚ್ಚರಿಕೆ ನೀಡಿದ್ದಾರೆ.