ಬೆಂಗಳೂರು: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ಗೆ 2024 ನೇ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ನನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.
ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ
ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2024 ರ ಅಕ್ಟೋಬರ್ 02 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಮಹಾತ್ಮಗಾಂಧೀಜಿಯವರು ಪ್ರಚುರಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು ಅಥವಾ ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ನಾಮನಿರ್ದೇಶನ ಕೂಡ ಮಾಡಬಹುದಾಗಿದೆ. ಸೆಪ್ಟೆಂಬರ್ 19 ರ ಸಂಜೆ 5.30 ರೊಳಗಾಗಿ ಅರ್ಜಿಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560 001 ಅಥವಾ ಇ-ಮೇಲ್ : informationdiprawards@gmail.com ವಿಳಾಸಕ್ಕೆ ಕಳುಹಿಸಬಹುದಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.