ಮನೆ ರಾಜ್ಯ ಹೆಚ್ಚಿನ ತೆರಿಗೆ ಜನಸಾಮಾನ್ಯರನ್ನು ಆರೋಗ್ಯ ವಿಮೆಗಳಿಂದ  ದೂರ ತಳ್ಳುತ್ತಿದೆ: ಆರೋಗ್ಯ ಸಚಿವ

ಹೆಚ್ಚಿನ ತೆರಿಗೆ ಜನಸಾಮಾನ್ಯರನ್ನು ಆರೋಗ್ಯ ವಿಮೆಗಳಿಂದ  ದೂರ ತಳ್ಳುತ್ತಿದೆ: ಆರೋಗ್ಯ ಸಚಿವ

ಆರೋಗ್ಯ ವಿಮೆ ಮೇಲಿನ ಶೇ18 ರಷ್ಟು ಜಿಎಸ್.ಟಿ ಮರು ಪರಿಶೀಲಿಸುವಂತೆ ಪ್ರಧಾನಿ ಯವರಿಗೆ ಪತ್ರ ಬರೆದ ಸಚಿವರು

0

ಬೆಂಗಳೂರು: ಆರೋಗ್ಯ ವಿಮೆಯ ಮೇಲಿನ ಶೇ 18 ರಷ್ಟು ಜಿ.ಎಸ್.ಟಿಯನ್ನ ಮರು ಪರಿಶೀಲಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ. ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿರುವ ಆರೋಗ್ಯ ಸಚಿವರು, ಸೆಪ್ಟೆಂಬರ್ 9 ರಂದು ಸಭೆ ಸೇರಲಿರುವ GST ಕೌನ್ಸಿಲ್‌ಗೆ ಮಧ್ಯಮ ಮತ್ತು ಕಡಿಮೆ ಆದಾಯದ ಪಾಲಿಸಿದಾರರಿಗೆ ಆರೋಗ್ಯ ವಿಮೆಯ ಮೇಲಿನ 18% ತೆರಿಗೆಯನ್ನು ಮರು ಪರಿಶೀಲಿಸುವಂತೆ ಶಿಫಾರಸು ಮಾಡಲು ಮನವಿ ಮಾಡಿದ್ದಾರೆ.

Join Our Whatsapp Group

ಆರೋಗ್ಯ ವಿಮೆ ಮೇಲೂ ಶೇ 18 ರಷ್ಟು ಜಿಎಸ್.ಟಿ ತೆರಿಗೆ ಹಾಕುವುದು ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ರಿದೆ. ಹೆಚ್ಚಿನ ತೆರಿಗೆಯಿಂದಾಗಿ ಹೆಲ್ತ್ ಇನ್ಸೂರೆನ್ಸ್ ಪ್ರೀಮಿಯಂ ದುಬಾರಿಯಾಗಿದ್ದು, ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಸಿಗುತ್ತಿಲ್ಲ. ಬಹುತೇಕ ಮಧ್ಯಮ ವರ್ಗದವರು ಇಂದು ಆರೋಗ್ಯ ವಿಮೆಗಳಿಂದ ದೂರವೇ ಉಳಿಯುತ್ತಿದ್ದಾರೆ.. ಆದರೆ  ವೈದ್ಯಕೀಯ ತುರ್ತು ಪರಿಸ್ಥಿತಿಗಳ ಸಂದರ್ಭಗಳಲ್ಲಿ ಆರೋಗ್ಯ ವಿಮೆಯ ರಕ್ಷಣೆ ಸಿಗದೆ ಇಡೀ ಕುಟುಂಬ ವರ್ಗವೇ ಆರ್ಥಿಕ ಸಂಕಷ್ಟಕ್ಕೆ ಸಿಲುಕುವುದನ್ನ ನಾವು ಕಾಣುತ್ತಿದ್ದೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸಾರ್ವತ್ರಿಕ ಆರೋಗ್ಯ ರಕ್ಷಣೆಗೆ ಸರ್ಕಾರಗಳು ಸತತ ಪ್ರಯತ್ನಗಳನ್ನ ಮುಂದುವರಿಸಿವೆ.‌ ದೇಶದಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಬರುವ ಮೊದಲೇ ಕರ್ನಾಟಕದಲ್ಲಿ ನಾವು 2018 ರಲ್ಲೇ ಆರೋಗ್ಯ ಕರ್ನಾಟಕ ಯೋಜನೆಯನ್ನ ಜಾರಿಗೊಳಿಸಿದ್ದೆವು. ಕೇಂದ್ರ ಸರ್ಕಾರವು “2047 ರ ವೇಳೆಗೆ ಸಾರ್ವತ್ರಿಕ ವಿಮಾ ಕವರೇಜ್” ಗುರಿಯೊಂದಿಗೆ ರಾಷ್ಟ್ರವ್ಯಾಪಿ ಮಿಷನ್ ಪ್ರಾರಂಭಿಸಿದೆ.. ಆದರೆ  ಆರೋಗ್ಯ ವಿಮೆಯನ್ನು ಸಂಪೂರ್ಣವಾಗಿ ನಿರಾಕರಿಸುವಷ್ಟು ಹೆಚ್ಚಿನ ದರದಲ್ಲಿ ತೆರಿಗೆ ವಿಧಿಸುವುದು ವಿಪರ್ಯಾಸ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‌

2017 ರಿಂದಲೂ ಆರೋಗ್ಯ ವಿಮೆಯ ಮೇಲೆ ಶೇ 18 ರಷ್ಟು ಜಿಎಸ್.ಟಿ ಹೇರಲಾಗಿದೆ. GST ಯ ಹೆಚ್ಚಿನ ದರವು ಪ್ರೀಮಿಯಂಗಳ ವೆಚ್ಚದ ಮೇಲೆ ನೇರ ಪರಿಣಾಮ ಬೀರುತ್ತದೆ.

ಪರಿಣಾಮ ಆರೋಗ್ಯ ವಿಮೆಯು ಈಗ ಹೆಚ್ಚು ದುಬಾರಿಯಾಗಿದೆ. ಹೆಚ್ಚುತ್ತಿರುವ ವೆಚ್ಚವು ಆರ್ಥಿಕ ದುರ್ಬಲ ವರ್ಗಗಳ ಮೇಲೆ ವಿನಾಶಕಾರಿ ಪರಿಣಾಮವನ್ನು ಬೀರುತ್ತದೆ, ಅವರಿಗೆ ಪ್ರೀಮಿಯಂನಲ್ಲಿ ಸ್ವಲ್ಪ ಹೆಚ್ಚಳವಾದರೂ ಅದನ್ನು ಖರೀದಿಸಲು ಸಾಧ್ಯವಿಲ್ಲ. ಹೀಗಾಗಿ ಆರೋಗ್ಯ ವಿಮೆಗಳನ್ನ ಜನರು ತಿರಸ್ಕರಿಸುತ್ತಿದ್ದಾರೆ. ವಿಮಾ ರಕ್ಷಣೆಯಿಂದ ವಂಚಿತರಾಗುತ್ತಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.