ಬೆಂಗಳೂರು: ಸಿಬ್ಬಂದಿ ನೇಮಕಾತಿ ಆಯೋಗ (ಎಸ್ಎಸ್ಸಿ) 39,481 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಸೇನಾ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಕಾನ್ಸ್ ಟೇಬಲ್, ರೈಫಲ್ ಮ್ಯಾನ್ ಮತ್ತು ಸಿಪಾಯಿ ಹುದ್ದೆಗಳ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ:
ಬಿಎಸ್ಎಫ್ – 15,654
ಸಿಐಎಸ್ಎಫ್ – 7145
ಸಿಆರ್ಪಿಎಫ್ – 11,541
ಎಸ್ಎಸ್ಬಿ – 819
ಐಟಿಬಿಪಿ – 3,017
ಎಆರ್ – 1,248
ಎಸ್ಎಸ್ಎಫ್ – 35
ಎನ್ಸಿಬಿ – 22
ವಿದ್ಯಾರ್ಹತೆ: 10ನೇ ತರಗತಿ ಉತ್ತೀರ್ಣರಾಗಿರಬೇಕು.
ವೇತನ: ಕಾನ್ಸ್ಟೇಬಲ್ ಹುದ್ದೆಗೆ 21,700- 69,100 ರೂ, ರೈಫಲ್ಮ್ಯಾನ್, ಸಿಪಾಯಿ ಹುದ್ದೆಗೆ 18,000- 56,900 ರೂಪಾಯಿ ನಿಗದಿಸಲಾಗಿದೆ.
ವಯೋಮಿತಿ: ಕನಿಷ್ಠ 18, ಜನವರಿ 2025ಕ್ಕೆ ಅನುಗುಣವಾಗಿ 23 ವರ್ಷ ಮೀರಿರಬಾರದು. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಹಾಗೂ ನಿವೃತ್ತ ಸೇವಾದಾರ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಪ.ಜಾತಿ, ಪ.ಪಂ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದ್ದು, ಇತರೆ ಅಭ್ಯರ್ಥಿಗಳಿಗೆ 100 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.
ಆಯ್ಕೆ ಹೇಗೆ?: ಕಂಪ್ಯೂಟರ್ ಆಧರಿತ ಪರೀಕ್ಷೆ, ದೈಹಿಕ ಗುಣಮಟ್ಟ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದಾಖಲಾತಿ ಪರಿಶೀಲನೆ.
ಈ ಹುದ್ದೆಗೆ ಸೆಪ್ಟೆಂಬರ್ 5ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 14 ಕಡೇಯ ದಿನ. ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ssc.gov.in ಇಲ್ಲಿಗೆ ಭೇಟಿ ನೀಡಿ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.