ಮನೆ ರಾಷ್ಟ್ರೀಯ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ: ಇಬ್ಬರು ಭಯೋತ್ಪಾದಕರ ಹತ್ಯೆ

ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆ: ಇಬ್ಬರು ಭಯೋತ್ಪಾದಕರ ಹತ್ಯೆ

0

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿಯಲ್ಲಿ ಭಾನುವಾರ ತಡರಾತ್ರಿ ಒಳನುಸುಳುವಿಕೆ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದ್ದು ಜೊತೆಗೆ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.

Join Our Whatsapp Group

ಗಡಿ ಜಿಲ್ಲೆಯ ನೌಶೇರಾ ಸೆಕ್ಟರ್‌ನಲ್ಲಿ ಭಾನುವಾರ ತಡರಾತ್ರಿ ಒಳನುಸುಳುವಿಕೆ ವಿರೋಧಿ ಕಾರ್ಯಾಚರಣೆ ನಡೆಸಿದ ವೇಳೆ ಇಬ್ಬರು ಗಡಿಭಾಗದಲ್ಲಿ ಒಳ ನುಸುಳಲು ಯತ್ನಿಸುತ್ತಿದ್ದರು ಎನ್ನಲಾಗಿದೆ ಈ ವೇಳೆ ಭದ್ರತಾ ಪಡೆ ಎಚ್ಚರಿಕೆ ನೀಡಿದ್ದಾರೆ ಆದರೂ ಒಳನುಸುಳಲು ಯತ್ನಿಸಿದ ಉಗ್ರರನ್ನು ಹೊಡೆದುರುಳಿಸಿದ್ದಾರೆ. ಅಲ್ಲದೆ ಅವರ ಬಳಿ ಇದ್ದ ಎಕೆ-47 ರೈಫಲ್‌ ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಗಡಿ ಭಾಗದಲ್ಲಿ ಉಗ್ರರ ಒಳನುಸುಳುವಿಕೆ ಹೆಚ್ಚುತ್ತಿರುವ ನಿಟ್ಟಿನಲ್ಲಿ ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.