ಮನೆ ಸ್ಥಳೀಯ ಸರ್ಕಾರದ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿ: ಡಾ.ಹೆಚ್.ಸಿ.ಮಹದೇವಪ್ಪ

ಸರ್ಕಾರದ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿ: ಡಾ.ಹೆಚ್.ಸಿ.ಮಹದೇವಪ್ಪ

0

ಮೈಸೂರು: ರಾಜ್ಯದ ಅಭಿವೃದ್ಧಿಯ ನೊಗ ಹೊತ್ತಿರುವ ನಾವೆಲ್ಲರೂ ಜವಬ್ದಾರಿಯುತ ಸ್ಥಾನದಲ್ಲಿದ್ದೇವೆ. ಸರ್ಕಾರದ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿ ದೇಶದಲ್ಲೇ ಕರ್ನಾಟಕ ರಾಜ್ಯ ಮಾದರಿಯಾಗುವಂತೆ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಶ್ರಮವಹಿಸಿ ಕೆಲಸ ಮಾಡಬೇಕಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು.

Join Our Whatsapp Group

ಇಂದು ನಗರದ ಧನ್ವಂತರಿ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದ ನವೀಕೃತ ಕಟ್ಟಡವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಜವಬ್ದಾರಿ ಮತ್ತು ಹೊಣೆಗಾರಿಕೆಯನ್ನು ಜನರ ಹಕ್ಕು ಮತ್ತು ರಕ್ಷಣೆಗೆ ಸಮರ್ಪಿಸಬೇಕಿದೆ ಎಂದು ಹೇಳಿದರು.

ಸಂವಿಧಾನದ ಅಡಿಯಲ್ಲಿ ಕೆಲಸ ಮಾಡುತ್ತಿರುವ ನಾವೆಲ್ಲರೂ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಸಾಮಾನ್ಯ ಜನರ ಏಳಿಗೆಗೆ ದುಡಿಯಬೇಕು. ಕಾನೂನಿನ್ವಯ ಕೆಲಸ ಮಾಡುವ ಮೂಲಕ ಯಾವಾಗಲೂ ಜನಪರವಾಗಿರಬೇಕು ಎಂದು ಕರೆ ನೀಡಿದರು.

ಬಸವಣ್ಣನ ಕಾಲದಿಂದಲೂ ಪ್ರಜಾಪ್ರಭುತ್ವ ಜಾರಿಯಲ್ಲಿದೆ. ಜನರಿಂದ, ಜನರಿಗಾಗಿ, ಜನರಿಗೋಸ್ಕರ ಆಡಳಿತ ನಡೆಸುವುದು ಪ್ರಜಾಪ್ರಭುತ್ವದ ಆಶಯ. ಜನರ ಭವಿಷ್ಯವನ್ನು ಉಜ್ವಗೊಳಿಸುವಲ್ಲಿ ಪ್ರಜಾಪ್ರಭುತ್ವದ ನಾಲ್ಕು ಆಧಾರ ಸ್ತಂಭಗಳ ಕರ್ತವ್ಯ ಮಹತ್ವದ್ದಾಗಿದೆ. ಅದರಲ್ಲಿ ಜನಪರವಾದ ಕಾಯ್ದೆಗಳನ್ನು ಅನುಷ್ಠಾನ ಮಾಡುವಲ್ಲಿ ಕಾರ್ಯಾಂಗದ ಕರ್ತವ್ಯವು ಹಿರಿದಾಗಿದೆ ಎಂದರು.

ಅಭಿವೃದ್ಧಿಯ ಕೇಂದ್ರ ಬಿಂದು ಸರ್ಕಾರಿ ನೌಕರರಾಗಿದ್ದಾರೆ. ಸರ್ಕಾರದ ಅಭಿವೃದ್ಧಿ ಯೋಜನೆಗಳು ಪರಿಣಾಮಕಾರಿ ಜಾರಿಯಾಗಲು ನೌಕಕರ ಶ್ರಮ ಬಹಳಷ್ಟಿದೆ. ನೌಕರರ ಸಮಸ್ಯೆಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿ ಕಾಲಕಾಲಕ್ಕೆ ಸೂಕ್ತ ಪರಿಹಾರ ಮಾರ್ಗಗಳನ್ನು ಅನುಸರಿಸುತ್ತಾ ಬಂದಿದೆ ಎಂದು ಹೇಳಿದರು.

ಶಾಸಕರಾದ ಹರೀಶ್ ಗೌಡ ಅವರು ಮಾತನಾಡಿ, ನಮ್ಮ ಸರ್ಕಾರವು 7ನೇ ವೇತನ ಆಯೋಗ ಜಾರಿಗೆ ಮಾಡಿದೆ. ಸರ್ಕಾರಿ ನೌಕರರ ಹಿತ ಕಾಪಾಡುವಲ್ಲಿ ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ‌. ಸಂಘಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಸಹಾಯ ಮತ್ತು ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀವತ್ಸ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಅರಪ ಜಿಲ್ಲಾಧಿಕಾರಿ ಪಿ.ಶಿವರಾಜು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಿಲ್ಲಾ ಸಂಘದ ಜಿಲ್ಲಾಧ್ಯಕ್ಷ ಗೋವಿಂದರಾಜು ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಸಂಘದ ಉಪಾಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.