ಮನೆ ರಾಜಕೀಯ ತುಕಾರಾಮ್ ಗೆಲುವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಶ್ರೀರಾಮುಲು ದಾವೆ

ತುಕಾರಾಮ್ ಗೆಲುವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಶ್ರೀರಾಮುಲು ದಾವೆ

0

ಬಳ್ಳಾರಿ: ವಾಲ್ಮೀಕಿ ಹಗರಣದ ಹಣವನ್ನು ಚುನಾವಣೆಯಲ್ಲಿ ಬಳಸಿ ಹಣ, ಹೆಂಡ ಹಂಚಿ ಮತದಾರರ ಮೇಲೆ ಪ್ರಭಾವ ಬೀರಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿದೆ. ಹಣ, ಹಂಚಿ ಗೆದ್ದಿರುವ ಕಾಂಗ್ರೆಸ್ ಸಂಸದ ತುಕಾರಾಮ್ ಗೆಲುವನ್ನು ಪ್ರಶ್ನಿಸಿ ಮಾಜಿ ಸಚಿವ ಬಿ.ಶ್ರೀರಾಮುಲು ಅವರು ಹೈಕೋರ್ಟ್ ನಲ್ಲಿ ದಾವೆ ಹೂಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾ ಮೋಹನ್ ಅಗರ್ವಾಲ್ ಬುಧವಾರ (ಸೆ 11) ಹೇಳಿಕೆ ನೀಡಿದ್ದಾರೆ.

Join Our Whatsapp Group

ಸಂಡೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಧಾ ಮೋಹನ್ ಅಗರ್ವಾಲ್ ” ಬಳ್ಳಾರಿ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ವಾಲ್ಮೀಕಿ ನಿಗಮದ 20.19 ಕೋಟಿ ಹಣ ಬಳಕೆಯಾಗಿದೆ ಎಂದು ಇಡಿ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ. 1975 ರಲ್ಲೂ ಇದೇ ರೀತಿ ಹಣ, ಹೆಂಡ ಹಂಚಿ ಗೆದ್ದಿದ್ದ ಇಂದಿರಾಗಾಂಧಿಯವರ ಗೆಲುವನ್ನು ಪ್ರಶ್ನಿಸಿ ಕೋರ್ಟ್ ಗೆ ಹೋಗಿತ್ತು. ಕೋರ್ಟ್ ಸದಸ್ಯತ್ವವನ್ನು ರದ್ದು ಪಡಿಸಿದ್ದು, ಇಂದಿರಾಗಾಂಧಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ಸಂಸದ ತುಕಾರಾಮ್ ಪ್ರಕರಣವೂ ಅದೇ ರೀತಿ ಆಗಲಿದೆ ಎಂದರು.

‘ವಾಲ್ಮೀಕಿ ಹಣಗರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ, ಇಡಿ ಚಾರ್ಜ್ ಶೀಟ್ ಸಲ್ಲಿಸಿದೆ. ನಾಗೇಂದ್ರನನ್ನು ರಕ್ಷಣೆ ಮಾಡಲು ಎಸ್ ಐಟಿ ಕ್ಲೀನ್ ಚಿಟ್ ನೀಡಿದೆ. ಇಡಿ ನಾಗೇಂದ್ರ ಅವರೇ ಪ್ರಮುಖ ಆರೋಪಿ ಎಂದಿದೆ.ಹಗರಣ ಕುರಿತು ಬಿಜೆಪಿ ಆರೋಪ ಮಾಡಿದಾಗ ಸಿಎಂ ಸಿದ್ದರಾಮಯ್ಯ ನಡೆದೇ ಇಲ್ಲ ಎಂದರು. ಬಳಿಕ ಅಧಿವೇಶನದಲ್ಲೇ 89 ಕೋಟಿ ರೂ. ಹಗರಣ ನಡೆದಿದೆ ಎಂದು ಒಪ್ಪಿಕೊಂಡಿದ್ದರು. ಅವರು ಸಹ ಮೂಡಾದಲ್ಲಿ ಬದಲಿ ನಿವೇಶನ ಪಡೆದು ಸುಮಾರು 4 ಸಾವಿರ ಕೋಟಿ‌ ಹಗರಣ ಮಾಡಿದ್ದಾರೆ’ ಎಂದರು.

‘ಮಲ್ಲಿಕಾರ್ಜುನ ಖರ್ಗೆ ಅಳಿಯನ ಹೆಸರಲ್ಲೂ ಐದು ಎಕರೆ ಜಮೀನು ಪಡೆದಿದ್ದಾರೆ. ಕಾಂಗ್ರೆಸ್ ಬರೀ ಭ್ರಷ್ಟಾಚಾರದಲ್ಲೇ ತೊಡಗಿದೆ. ಲೋಕಸಭೆ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಸೇರಿ ಎಲ್ಲರೂ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿದ್ದಾರೆ’ ಎಂದು ಆರೋಪಿಸಿದರು.

ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದ್ದು ಬಿಜೆಪಿ ವಾಲ್ಮೀಕಿ ಹಗರಣವನ್ನೇ ಪ್ರಮುಖ ಅಸ್ತ್ರವನ್ನಾಗಿಸಿ ಹೋರಾಟಕ್ಕೆ ಸಿದ್ಧತೆ ಮಾಡಿಕೊಂಡಿದೆ.