ಮನೆ ರಾಜ್ಯ ರಾಜ್ಯದಲ್ಲಿ 171 ಮಂದಿಗೆ ಕೋವಿಡ್ ಸೋಂಕು

ರಾಜ್ಯದಲ್ಲಿ 171 ಮಂದಿಗೆ ಕೋವಿಡ್ ಸೋಂಕು

0

ಬೆಂಗಳೂರು (Bengaluru)-ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 171 ಮಂದಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,51,302ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40064 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

121 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,09369ಕ್ಕೆ ಏರಿಕೆಯಾಗಿದೆ. ಇನ್ನು 1827 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 161 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,86,973ಕ್ಕೆ ಏರಿಕೆಯಾಗಿದೆ.