ಮನೆ ಅಪರಾಧ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

0

ಉಪ್ಪಿನಂಗಡಿ: ಅಪ್ರಾಪ್ತ ವಯಸ್ಕ ಕಾಲೇಜು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಆಕೆಯ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್‌ (38) ವಿರುದ್ಧ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

Join Our Whatsapp Group

ನೆಲ್ಯಾಡಿಯ ಕಾಲೇಜೊಂದರ ವಿದ್ಯಾರ್ಥಿನಿಯನ್ನು ಜೂ. 14 ರಂದು ಪುತ್ತೂರಿನಲ್ಲಿ ಪರಿಚಯಿಸಿಕೊಂಡ ಆರೋಪಿಯು ದೂರವಾಣಿ ಮೂಲಕ ಸಂಪರ್ಕಿಸಿ ಆತ್ಮೀಯತೆ ಬೆಳೆಸಿದ್ದ. ಜು. 21ರಂದು ಆಕೆಯನ್ನು ನೆಲ್ಯಾಡಿಗೆ ಕರೆಸಿಕೊಂಡು ಪಿಕಪ್‌ ವಾಹನದಲ್ಲಿ ಬಜತ್ತೂರು ಗ್ರಾಮದ ಕಾಂಚನ ಎಂಬಲ್ಲಿನ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿರುತ್ತಾನೆ ಹಾಗೂ ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡಲಾಗುವುದು ಎಂದು ಬೆದರಿಕೆ ಒಡ್ಡಿರುತ್ತಾನೆಂದು ಸಂತ್ರಸ್ತೆಯು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿರುತ್ತಾಳೆ.