ಮನೆ ಕಾನೂನು ಪಂಜಾಬ್ ಪೊಲೀಸರಿಂದ ಪ್ರಮುಖ ಆರೋಪಿ ಬಂಧನ: 3ನೇ ಆರೋಪಿಗಾಗಿ ಶೋಧ

ಪಂಜಾಬ್ ಪೊಲೀಸರಿಂದ ಪ್ರಮುಖ ಆರೋಪಿ ಬಂಧನ: 3ನೇ ಆರೋಪಿಗಾಗಿ ಶೋಧ

0

ಪಂಜಾಬ್: ಚಂಡೀಗಢದ ಸೆಕ್ಟರ್ 10ರ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಮನೆಯಲ್ಲಿ ನಡೆದ ಗ್ರೆನೇಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಪಂಜಾಬ್ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

Join Our Whatsapp Group

ಈ ಕುರಿತು ಪೊಲೀಸರು ‘X’ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಗ್ರೆನೇಡ್ ದಾಳಿ ನಡೆಸಿದ ಪ್ರಮುಖ ಆರೋಪಿಯನ್ನು ರೋಹನ್ ಮಸಿಹ್ ಎಂದು ಹೇಳಲಾಗಿದ್ದು ಈತ ಅಮೃತಸರದ ಪಸಿಯಾ ಗ್ರಾಮದ ನಿವಾಸಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತ ಆರೋಪಿಯಿಂದ 9 ಎಂಎಂ ಗ್ಲೋಕ್ ಪಿಸ್ತೂಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಪ್ರಾಥಮಿಕ ತನಿಖೆ ವೇಳೆ ದಾಳಿ ನಡೆಸಿರುವುದಾಗಿ ಒಪ್ಪಿಕೊಂಡಿದ್ದಾನೆ ಇನ್ನೂ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೂರನೇ ಆರೋಪಿಗಾಗಿ ಶೋಧ:

ಪ್ರಕರಣದ ಮೊದಲ ಆರೋಪಿಯನ್ನು ಪಂಜಾಬ್ ಪೊಲೀಸರು ಗುರುವಾರ ಬಂಧಿಸಿದ್ದು. ಈ ನಡುವೆ ಮೂರನೇ ಆರೋಪಿ ಪರಾರಿಯಾಗಿದ್ದಾನೆ. ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಬುಧವಾರ (ಸೆ. 11) ಸಂಜೆ 5.30ರ ಸುಮಾರಿಗೆ ಗ್ರೆನೇಡ್ ದಾಳಿ ನಡೆದಿದ್ದು, ಸ್ಫೋಟದ ರಭಸಕ್ಕೆ ಮನೆಯ ಕಿಟಕಿ, ಹೂವಿನ ಕುಂಡಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸ್ಫೋಟ ಸಂಭವಿಸುವ ಕೆಲ ಸಮಯದ ಮೊದಲು ಆಟೋರಿಕ್ಷಾದಲ್ಲಿ ಮೂವರು ಬಂದಿರುವ ಮಾಹಿತಿಯನ್ನು ಪೊಲೀಸರು ಕಲೆಹಾಕಿದ್ದು ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ.