ಮನೆ ಅಪರಾಧ ಮನೆಗಳವು ಮಾಡುತ್ತಿದ್ದ ಇಬ್ಬರ ಬಂಧನ: 31.10 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಮನೆಗಳವು ಮಾಡುತ್ತಿದ್ದ ಇಬ್ಬರ ಬಂಧನ: 31.10 ಲಕ್ಷ ಮೌಲ್ಯದ ಚಿನ್ನಾಭರಣ ವಶ

0

ಬೆಂಗಳೂರು, ಸೆಪ್ಟಂಬರ್ 14: ಶ್ರೀನಗರದಲ್ಲಿ ಮನೆಯೊಂದರಲ್ಲಿ ಚಿನ್ನಾಭರಣ ಕಳ್ಳತನವಾದ ಕುರಿತು ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Join Our Whatsapp Group

ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ಶ್ರೀನಗರದ ಬಸ್ ನಿಲ್ದಾಣದ ಹತ್ತಿರಇಬ್ಬರು ವ್ಯಕ್ತಿಗಳನ್ನು ಕೃತ್ಯಕ್ಕೆ ಬಳಸಿದ್ದ 1 ದ್ವಿ-ಚಕ್ರ ವಾಹನ ಮತ್ತು 20 ಗ್ರಾಂ ಚಿನ್ನದ ಚೈನ್‌ನ  ಸಮೇತ ವಶಕ್ಕೆ ಪಡೆದುಕೊಂಡಿದ್ದು, ಆರೋಪಿಗಳು ತಪ್ಪನ್ನು ಒಪ್ಪಿಕೊಂಡಿದ್ದಾರೆ.

 ಈ ಹಿಂದೆ ಕಳವು ಮಾಡಿರುವ ಚಿನ್ನಾಭರಣಗಳನ್ನು ಮೈಸೂರು ಜಿಲ್ಲೆಯ ವಿವಿಧ ಫೈನಾನ್ಸ್ ಕಂಪನಿಗಳಲ್ಲಿ,  ಮಂಡ್ಯ ಜಿಲ್ಲೆಯ ಜ್ಯೂವೆಲರಿ ಶಾಪ್‌ನಲ್ಲಿ ಹಾಗೂ ಶ್ರೀನಗರದಲ್ಲಿ ವಾಸವಿರುವ ಸ್ನೇಹಿತನಿಗೆ ನೀಡಿರುವುದಾಗಿ ತಿಳಿಸಿರುತ್ತಾರೆ.

  ಮೈಸೂರು ನಗರದ ವಿವಿಧ ಜ್ಯೂವೆಲರಿಅಂಗಡಿ ಮತ್ತು ವಿವಿಧ ಫೈನಾನ್ಸ್ ಕಂಪನಿಗಳಲ್ಲಿ ಅಡವಿಟ್ಟಿದ್ದ ಒಟ್ಟು 236.27 ಗ್ರಾಂ ಚಿನ್ನಾಭರಣ, ಮಂಡ್ಯ ಮತ್ತು ಮೈಸೂರು ಜಿಲ್ಲೆಯ ಜ್ಯೂವೆಲರಿ ಅಂಗಡಿಗಳಿಂದ  ಹಾಗೂ ಆರೋಪಿತರ ಸ್ನೇಹಿತನ ಮನೆಯಲ್ಲಿಟ್ಟಿದ್ದ 144 ಗ್ರಾಂಚಿನ್ನಾಭರಣ ಮತ್ತು 2 ವಾಚ್‌ಗಳನ್ನು ವಶಪಡಿಸಿಕೊಳ್ಳಲಾಯಿತು.

ಈ ಆರೋಪಿಗಳಿಬ್ಬರಿಂದ ಒಟ್ಟಾರೆಯಾಗಿ 31.10 ಲಕ್ಷ ಮೌಲ್ಯದ 478 ಗ್ರಾಂ ಚಿನ್ನಾಭರಣ, 2 ವಾಚ್, 1-ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿರುತ್ತದೆ. 

ಈ ಪ್ರಕರಣದ ಆರೋಪಿಗಳ ಪತ್ತೆಯಿಂದ  ಹನುಮಂತನಗರ ಪೊಲೀಸ್ ಠಾಣೆ, ಮೈಸೂರಿನ ವಿಜಯನಗರ ಪೊಲೀಸ್‌ ಠಾಣೆ, ಜಯಪುರ ಪೊಲೀಸ್‌ಠಾಣೆ,   ಇಲವಾಲ ಪೊಲೀಸ್‌ಠಾಣೆಯ ತಲಾ ಒಂದು ಮನೆ ಕಳವು ಪ್ರಕರಣ ಸೇರಿದಂತೆ ಒಟ್ಟು 4 ಮನೆ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.

ಆರೋಪಿಗಳಿಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತೆ.

ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರವರಾದ  ಲೋಕೇಶ್.ಭ.ಜಗಲಸರ್‌ರವರ ಮಾರ್ಗದರ್ಶನದಲ್ಲಿ, ವಿ.ವಿ.ಪುರಂ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರವರಾದ ಶಾಮೀದ್ ಬಾಷಾ ರವರ ಮಾರ್ಗದರ್ಶನದಲ್ಲಿ ಹನುಮಂತನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ವಿನೋದ್ ಭಟ್‌ರವರ ನೇತೃತ್ವದ ಅಧಿಕಾರಿ/ಸಿಬ್ಬಂದಿಗಳ ತಂಡ ಈ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.