ಬೆಂಗಳೂರು: ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ತಾಕೀತು ಮಾಡಿದರು.
ಅಧಿಕಾರಕ್ಕೇ ಬಂದಾಗಿಂದಲು
ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ & ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ?
ಸಿದ್ದರಾಮಯ್ಯನವರೇ.. ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು (2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ!!
ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ ಎಂದು ಕಿಡಿಕಾರಿದರು.
ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ರಾಜ್ಯ ಸರಕಾರಕ್ಕೆ ತಾಕೀತುಮಾಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.