ಮನೆ ಅಪರಾಧ ಹಿಟ್ ಅಂಡ್ ರನ್ ಪ್ರಕರಣ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಹಿಟ್ ಅಂಡ್ ರನ್ ಪ್ರಕರಣ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

0

ಚಾಮರಾಜನಗರ(Chamarajanagar): ಅಪರಿಚಿತ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಸಗೂಲಿ ಗ್ರಾಮದಲ್ಲಿ  ನಿನ್ನೆ ತಡರಾತ್ರಿ ನಡೆದಿದೆ.

ಅಪಘಾತದಲ್ಲಿ ಗುಂಡ್ಲುಪೇಟೆ ತಾಲೂಕಿನ ಆಲತ್ತೂರು‌ ಗ್ರಾಮದ ವೆಂಕಟೇಶ್(30) ಹಾಗೂ ಕಾಂತಾಚಾರಿ(50) ಎಂಬುವರು ಮೃತಪಟ್ಟಿದ್ದಾರೆ.

ಹಸಗೂಲಿ ಕಡೆಯಿಂದ ಆಲತ್ತೂರಿಗೆ ಇಬ್ಬರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅತೀ ವೇಗದಿಂದ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.