ಮನೆ ಅಪರಾಧ ಡಿಕೆಶಿ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣ: ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ಡಿಕೆಶಿ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣ: ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

0

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇದಿಗ ಸುಪ್ರೀಂ ಕೋರ್ಟಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ್ದು, ವಿಚರಣೆಯನ್ನು ನಾಲ್ಕು ವಾರಗಳ ಮುಂದೂಡಿದೆ.

Join Our Whatsapp Group

ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಡಿಸಿಎಂ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರ ಹಾಗೂ ಲೋಕಾಯುಕ್ತಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ವಿಚರಣೆಯನ್ನು ನಾಲ್ಕು ವಾರಗಳ ಮುಂದೂಡಿಕೆ ಮಾಡಲಾಗಿದೆ.

ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಇತ್ತೀಚಿಗೆ ಹೈಕೋರ್ಟ್ ನಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ಹಾಗೂ ಶಾಸಕ ಯತ್ನಾಳ್ ಸಲ್ಲಿಸಿದ್ದ ಅರ್ಜಿ ಕುರಿತು ವಿಚಾರಣೆ ನಡೆಸಿದ ನ್ಯಾಯಾಲಯ, ರಾಜ್ಯ-ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್ ತೀರ್ಮಾನಿಸಬೇಕು ಎಂದು ಹೇಳಿ ಅರ್ಜಿ ವಜಾ ಗೊಳಿಸಿತ್ತು. ಇದೀಗ ಶಾಸಕ ಬಸನಗೌಡ ಪಾಟೀಲ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.