ಮನೆ ರಾಜಕೀಯ ನಾಗಮಂಗಲ ಘಟನೆ: ತನಿಖೆ ಬಳಿಕ ಇನ್ನಷ್ಟು ಕ್ರಮ- ಗೃಹ ಸಚಿವ ಪರಮೇಶ್ವರ್ ಹೇಳಿಕೆ

ನಾಗಮಂಗಲ ಘಟನೆ: ತನಿಖೆ ಬಳಿಕ ಇನ್ನಷ್ಟು ಕ್ರಮ- ಗೃಹ ಸಚಿವ ಪರಮೇಶ್ವರ್ ಹೇಳಿಕೆ

0

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ತಿಳಿಸಿದರು.

Join Our Whatsapp Group

ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಈಗಾಗಲೇ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅಹಿತಕರ ಘಟನೆಯಲ್ಲಿ ಯಾರ್ಯಾರು ಭಾಗಿ ಎಂಬುದು ತನಿಖೆಯಿಂದ ಬಯಲಿಗೆ ಬರಲಿದೆ ಎಂದರು.

ಶಾಸಕ ಮುನಿರತ್ನ ಅವರನ್ನು ತರಾತುರಿಯಲ್ಲಿ ಬಂಧಿಸಿಲ್ಲ. ದೂರು ದಾಖಲಾದ ನಂತರ ಬಂಧನವಾಗಿದೆ. ಆದರೆ ಯಾದಗಿರಿ ಶಾಸಕರ ವಿರುದ್ದ ದೂರಿಗೂ ಇದಕ್ಕೂ ವ್ಯತ್ಯಾಸ ವಿದೆ ಎಂದರು.