ಬೆಂಗಳೂರು: ನಾಗಮಂಗಲದಲ್ಲಿ ವಿಚಾರಣೆ ನಡೆಸುವ ಮೊದಲೇ ಕಾಂಗ್ರೆಸ್ ಸರ್ಕಾರ ತಪ್ಪಿತಸ್ಥರಿಗೆ ಕ್ಲೀನ್ ಚಿಟ್ ನೀಡುತ್ತಿದೆ. ಮೊದಲು ತನಿಖೆ ನಡೆಸಿ, ನಂತರ ತಪ್ಪಿತಸ್ಥರು ಯಾರೆಂದು ತೀರ್ಮಾನಿಸಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಿಧಾನಸೌಧದಲ್ಲಿ ಪಾಕ್ ಜಿಂದಾಬಾದ್ ಕೂಗಿದಾಗ ಹಾಗೆ ಆಗಿಯೇ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಬಾಂಬ್ ಸ್ಫೋಟವಾದಾಗಲೂ ಅದು ವ್ಯಾಪಾರದ ಜಗಳ ಎಂದು ಹೇಳಿದ್ದರು. ಕುಕ್ಕರ್ ಬಾಂಬ್ ಸ್ಫೋಟದ ಬಗ್ಗೆಯೂ ಹೀಗೆಯೇ ಹೇಳಿದ್ದರು. ನಾಗಮಂಗಲದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಿರುವುದು ಬಗ್ಗೆ ಮೊದಲು ಪರಿಶೀಲಿಸಲಿ. ಆದರೆ ಸಚಿವ ಪ್ರಿಯಾಂಕ್ ಖರ್ಗೆಯಂಥವರು ಅದನ್ನು ಸಮರ್ಥಿಸಿಕೊಳ್ಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಭಾರತವನ್ನು ಎರಡು ಭಾಗ ಮಾಡಿದ ಕಾಂಗ್ರೆಸ್ ಮತ್ತೆ ತಲೆಯತ್ತಿ ಮಂಡ್ಯದಲ್ಲಿ ಕೋಮುಗಲಭೆಗೆ ಕಾರಣವಾಗಿದೆ. ವಿದೇಶಕ್ಕೆ ಹೋದ ರಾಹುಲ್ ಗಾಂಧಿ, ಭಾರತದ ವಿರುದ್ಧ ಮಾತಾಡುವುದರ ಜೊತೆಗೆ ಮೀಸಲಾತಿ ತೆಗೆದುಹಾಕುವ ಬಗ್ಗೆ ಹೇಳಿದ್ದಾರೆ. ಕಾಂಗ್ರೆಸ್ ಆಡಳಿತ ಬರುವ ಕಡೆಗಳಲ್ಲಿ ಮುಸ್ಲಿಂ ಮೂಲಭೂತವಾದಿಗಳಿಗೆ ಹಬ್ಬದ ವಾತಾವರಣ ಇರುತ್ತದೆ. ಸವಾಲು ಹಾಕುವವರನ್ನು ಜೈಲಿಗೆ ಹಾಕುವ ಬದಲು ಪೊಲೀಸರು ಅವರನ್ನು ಕರೆದು ಕಾಫಿ ಕೊಟ್ಟಿದ್ದಾರೆ. ಇದಕ್ಕಾಗಿಯೇ ಕೋಮು ದಳ್ಳುರಿ ಉಂಟಾಗಿದೆ. ಒಂದೇ ಸಮುದಾಯವನ್ನು ವೈಭವೀಕರಿಸಲಾಗುತ್ತಿದೆ. ಆ ಸಮುದಾಯದವರು ಏನು ಮಾಡಿದರೂ ಕ್ರಮ ಕೈಗೊಳ್ಳುವುದಿಲ್ಲ ಎಂದು ದೂರಿದರು.
ಒಕ್ಕಲಿಗ ಸಮುದಾಯದ ಸರ್ವೋಚ್ಛ ನಾಯಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಗೌರವ ಹಾಳು ಮಾಡಲು ಕಾಂಗ್ರೆಸ್ ನಾಯಕರು ಯತ್ನಿಸಿದ್ದಾರೆ. ಒಕ್ಕಲಿಗರ ಮೇಲೆ ಅಷ್ಟು ಒಲವಿದ್ದರೆ ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ತೆಗೆದುಹಾಕಿ ಒಕ್ಕಲಿಗರನ್ನೇ ಮುಖ್ಯಮಂತ್ರಿ ಮಾಡಲಿ. ಡಿ.ಕೆ.ಶಿವಕುಮಾರ್ ಪೇಪರ್, ಪೆನ್ನು ಹಿಡಿದುಕೊಂಡು ಅಮೆರಿಕಕ್ಕೆ ಹೋಗಿದ್ದಾರೆ ಎಂದು ವ್ಯಂಗ್ಯವಾಡಿದರು.
ಪ್ರಧಾನಿ ಜನ್ಮದಿನ ಆಚರಣೆ
ಜನಪ್ರಿಯ ನಾಯಕ, ವಿಶ್ವನಾಯಕ ನರೇಂದ್ರ ಮೋದಿಯವರ ಜನ್ಮದಿನ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ಸೇವೆ ಮಾಡುತ್ತಿದ್ದಾರೆ. 25,000 ಕಾರ್ಯಕರ್ತರು 58,000 ಬೂತ್‌ಗಳಲ್ಲಿ ರಕ್ತದಾನ ಮಾಡುತ್ತಿದ್ದಾರೆ. ಈ ಮೂಲಕ ಪ್ರಧಾನಿಯವರ ಜನ್ಮದಿನಕ್ಕೆ ಶುಭ ಕೋರಲಾಗುತ್ತಿದೆ. ನರೇಂದ್ರ ಮೋದಿಯವರು ದೇಶದ ನಾಯಕತ್ವ ವಹಿಸಿಕೊಂಡ ನಂತರ ಭಾರತ ಅಭಿವೃದ್ಧಿ ಪಥದತ್ತ ನಡೆಯುತ್ತಿದೆ. ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ದೇಶ ಮುಂಚೂಣಿಯಲ್ಲಿದೆ. ವಂದೇ ಭಾರತ್ ರೈಲಿನ ಮೂಲಕ ವಿಶ್ವದರ್ಜೆಯ ಸೇವೆ ದೊರೆತಿದೆ ಎಂದರು.
ಒಂದು ದೇಶದಲ್ಲಿ ಎರಡು ಧ್ವಜ, ಎರಡು ಸಂವಿಧಾನ ಇರಬಾರದೆಂಬುದು ಬಿಜೆಪಿ ಸಿದ್ಧಾಂತ. ಅದನ್ನು ಪ್ರಧಾನಿ ಮೋದಿ ಅನುಷ್ಠಾನಕ್ಕೆ ತಂದು, ಜಮ್ಮು-ಕಾಶ್ಮೀರಕ್ಕೆ ಹೊಸತನ ತಂದಿದ್ದಾರೆ. ಅಲ್ಲಿನ ಜನರು ಭೀತಿಯಿಲ್ಲದೆ ಓಡಾಡುತ್ತಿದ್ದಾರೆ. ರಾಮ ಮಂದಿರ ಕೂಡ ಸುಗಮವಾಗಿ ನಿರ್ಮಾಣವಾಗಿ ಹಿಂದೂಗಳ ಕನಸು ನನಸಾಗಿದೆ ಎಂದರು.
🎯 ರೈಲ್ವೆ ಟೆಕ್ನಿಷಿಯನ್ ನೇಮಕಾತಿ 2024 – 14,928 ಹುದ್ದೆಗಳು 🛠️
ಅರಿಶಿನ ಕುಂಕುಮದ ನೈಜ ಮಹತ್ವ ದೇವರ ದರ್ಶನಕ್ಕೂ, ಆರೋಗ್ಯಕ್ಕೂ 🌼✨
ಪ್ರಧಾನ ಮಂತ್ರಿ ಆವಾಸ್ ಯೋಜನೆಮನೆ ಕಟ್ಟಲು ಪಡೆಯಿರಿ ಸರ್ಕಾರದಿಂದ ಸಬ್ಸಿಡಿ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ಆರೋಗ್ಯ ಸಲಹೆ…..
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.