ಮನೆ ಉದ್ಯೋಗ ಗ್ರಂಥಾಲಯ ಕಂ ಮಾಹಿತಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ಗ್ರಂಥಾಲಯ ಕಂ ಮಾಹಿತಿ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

0

ರಾಮನಗರ, ಸೆಪ್ಟಂಬರ್ 1: ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕೋಡಂಬಳ್ಳಿ ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ತೆರವಾಗಿರುವ ಗ್ರಂಥಾಲಯ ಕಂ ಮಾಹಿತಿ ಸಹಾಯಕರ ಹುದ್ದೆಗೆ ಮಾಸಿಕ ಕನಿಷ್ಠ ವೇತನ ಜೊತೆಗೆ ಕಾರ್ಮಿಕ ಇಲಾಖೆಯು ಕಾಲಕಾಲಕ್ಕೆ ನಿಗದಿಪಡಿಸುವ ವ್ಯತ್ಯಯವಾಗುವ ತುಟ್ಟಿ ಭತ್ಯೆಯನ್ವಯ ನೇಮಕಾತಿಗೆ ಕೋಡಂಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

Join Our Whatsapp Group

ಅರ್ಜಿಯನ್ನು ಜಿಲ್ಲಾ ಪಂಚಾಯತ್‌ನ ಉಪಕಾರ್ಯದರ್ಶಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ ಇದೇ ಅಕ್ಟೋಬರ್ 1ರ ಸಂಜೆ 4 ಗಂಟೆಯೊಳಗೆ ನೇರವಾಗಿ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದಾಗಿದೆ. ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದವರು 30-9-2024ಕ್ಕೆ ವಯೋ ನಿವೃತ್ತಿಯಿಂದ ತೆರವಾಗಲಿದ್ದು, ಈಕಾರಣದಿಂದ ನೇಮಕಾತಿ ನಡೆಯಲಿದೆ.

ಹೆಚ್ಚಿನ ಮಾಹಿತಿಗೆ ಬಿ.ಎಂ.ರಸ್ತೆಯಲ್ಲಿರುವ ಪಂಚಾಯತ್ ಭವನದ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಗ್ರಾಮ ಪಂಚಾಯಿತಿ ಗ್ರಂಥಾಲಯ ಕಂ ಮಾಹಿತಿ ಸಹಾಯಕರ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಆಗಿರುವ ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.