ಮನೆ ಅಪರಾಧ ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

0

ಹಾವೇರಿ: ಖಾಸಗಿ ಬಸ್‌ ಪಲ್ಟಿಯಾಗಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಬುಧವಾರ(ಸೆ18 ) ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಳಗಿನ ಜಾವ ನಡೆದಿದೆ.

Join Our Whatsapp Group

ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದರಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಅದೃಷ್ಟವಷಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಗಾಯಾಳುಗಳೆಲ್ಲರೂ ಪಾರಾಗಿದ್ದು, ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.