ಕಲಬುರ್ಗಿ: ಎಲ್ಲರ ಮೇಲೂ ಸದಾ ಆರೋಪ ಮಾಡುವುದೇ ಬಿಜೆಪಿ ಕೆಲಸ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಕಲಬುರ್ಗಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು.
ನಾಗಮಂಗಲ, ಮಂಗಳೂರು ಸೇರಿದಂತೆ ಒಂದಷ್ಟು ಕಡೆ ಗಣಪತಿ ವಿಸರ್ಜನೆ ಗಲಾಟೆಗಳಲ್ಲಿ ಪಿಎಫ್ ಐ, ಬಾಂಗ್ಲಾ ವಲಸಿಗರ ಕೈವಾಡವಿದೆ ಎನ್ನುವ ಬಿಜೆಪಿ ಆರೋಪದ ಬಗ್ಗೆ ಕೇಳಿದಾಗ, ಗಣಪತಿ ವಿಸರ್ಜನೆ ವೇಳೆ ಉಂಟಾಗಿರುವ ಗಲಭೆಗಳ ವಿರುದ್ಧ ನಮ್ಮ ಸರ್ಕಾರ ಕೂಡಲೇ ಕ್ರಮ ತೆಗೆದುಕೊಂಡಿದೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಕೆಲಸ ಸರ್ಕಾರ ಮಾಡುತ್ತದೆ. ಪೊಲೀಸ್ ಇಲಾಖೆ ಯಾವ ಕ್ರಮ ತೆಗೆದುಕೊಳ್ಳಬೇಕು ಅದನ್ನು ತೆಗೆದುಕೊಳ್ಳುತ್ತದೆ. ಈ ವಿಚಾರದಲ್ಲಿ ರಾಜಕಾರಣ ಮಾತನಾಡುವವರು ಮಾತನಾಡಲಿ ಎಂದರು.
ಪರಪ್ಪನ ಅಗ್ರಹಾರದ ಮೇಲೆ ಪೊಲೀಸ್ ದಾಳಿ, ಗುತ್ತಿಗೆದಾರ ಚೆಲುವರಾಜು ಅವರಿಂದ ಶಾಸಕ ಮುನಿರತ್ನ ಅವರ ಮತ್ತೊಂದು ಆಡಿಯೋ ಬಿಡುಗಡೆ ಬಗ್ಗೆ ಕೇಳಿದಾಗ “ನಾನು ಅಮೆರಿಕದಲ್ಲಿದ್ದ ಕಾರಣಕ್ಕೆ ಯಾವ ವಿಚಾರಗಳ ಬಗ್ಗೆಯೂ ಮಾಹಿತಿ ಇಲ್ಲ. ಎಲ್ಲದರ ಬಗ್ಗೆ ತಿಳಿದು ಮಾತನಾಡುತ್ತೇನೆ ಎಂದು ಹೇಳಿದರು.
ಅಮೆರಿಕ ಪ್ರವಾಸದ ಬಗ್ಗೆ ಕೇಳಿದಾಗ, ಅಮೆರಿಕದ ಚುನಾವಣಾ ಪದ್ಧತಿ, ಅಲ್ಲಿನ ಯುವಕರ ಉತ್ಸಾಹ, ಆಸಕ್ತಿ ಸೇರಿದಂತೆ ಅನೇಕ ವಿಚಾರಗಳನ್ನು ನಾವು ಕಲಿಯಬೇಕಿದೆ. ಅಮೆರಿಕಗೆ ಕುಟುಂಬ ಸಮೇತ ಖಾಸಗಿ ಪ್ರವಾಸಕ್ಕೆ ಹೋಗಿದ್ದೆ ಎಂದು ಹೇಳಿದರು.
ಅಮೆರಿಕ ಅಧ್ಯಕ್ಷೀಯ ಚುನಾವಣಾ ಅಭ್ಯರ್ಥಿ ಕಮಲ ಹ್ಯಾರಿಸ್ ಸೇರಿದಂತೆ ನಾನು ಯಾರನ್ನೂ ಭೇಟಿಯಾಗಿಲ್ಲ. ಇದೆಲ್ಲವೂ ಸುಳ್ಳು ಸುದ್ದಿ. ನಾನು ಹೋದ ಸಮಯದಲ್ಲೇ ಚುನಾವಣಾ ರ್ಯಾಲಿ ನಡೆಯುತ್ತಿತ್ತು. ಅದು ಹೇಗೆ ನಡೆಯುತ್ತದೆ ಎಂದು ವೀಕ್ಷಿಸಿದೆ ಎಂದರು.
🎯 ರೈಲ್ವೆ ಟೆಕ್ನಿಷಿಯನ್ ನೇಮಕಾತಿ 2024 – 14,928 ಹುದ್ದೆಗಳು 🛠️
ಅರಿಶಿನ ಕುಂಕುಮದ ನೈಜ ಮಹತ್ವ ದೇವರ ದರ್ಶನಕ್ಕೂ, ಆರೋಗ್ಯಕ್ಕೂ 🌼✨
ಪ್ರಧಾನ ಮಂತ್ರಿ ಆವಾಸ್ ಯೋಜನೆಮನೆ ಕಟ್ಟಲು ಪಡೆಯಿರಿ ಸರ್ಕಾರದಿಂದ ಸಬ್ಸಿಡಿ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ಆರೋಗ್ಯ ಸಲಹೆ…..
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.