ಮನೆ ಸ್ಥಳೀಯ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

0

 ಮೈಸೂರು: ಹಿಂದುಸ್ತಾನ್ ಏರೋನ್ಯಾಟಿಕ್ಸ್ (ಲಿ) ಟೆಕ್ನಿಕಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ಬೆಂಗಳೂರು ಇವರ ವತಿಯಿಂದ ಫಿಟ್ಟರ್, ಟರ್ನರ್, ಮಿಷಿನಿಸ್ಟ್, ಎಲೆಕ್ಟ್ರಿಷಿಯನ್ , ವೆಲ್ಡರ್, COPA, ಕಾರ್ಪೆಂಟರ್, ಫೌಂಡ್ರಿ ಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂರ್ & ಡೈ ಮೇಕರ್, ಸಿ.ಎನ್.ಸಿ ಪ್ರೋಗ್ರಾಮರ್ ಕಮ್ ಆಪರೇಟರ್, ಟ್ರೇಡ್‌ಗಳಿಗೆ ಫುಲ್ ಟರ್ಮ್ ಅಪ್ರೆಂಟಿಸ್ ತರಬೇತಿಗೆ ಐ.ಟಿ.ಐ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 ಆಸಕ್ತ ಅಭ್ಯರ್ಥಿಗಳು ಕಡ್ಡಾಯವಾಗಿ apprenticeshipindia.org/candidate-registration  ನಲ್ಲಿ ನೋಂದಾಯಿಸಿಕೊoಡು, ಅರ್ಜಿ ನಮೂನೆಯಲ್ಲಿ ಅಪ್ರೆಂಟಿಸ್ ನೋಂದಣಿ ಸಂಖ್ಯೆಯನ್ನು ನಮೂದಿಸಬೇಕಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್ 08 ಕೊನೆಯ ದಿನಾಂಕವಾಗಿರುತ್ತದೆ.

 ಹೆಚ್ಚಿನ ಮಾಹಿತಿಗಾಗಿ ದೂ.ಸಂ:0821-2489972 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.