ಮನೆ ಅಪರಾಧ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ

0

ಕಟಪಾಡಿ: ಚಾಲಕನ ನಿಯಂತ್ರಣ ತಪ್ಪಿದ ವಾಹನವೊಂದು ಉದ್ಯಾವರದಲ್ಲಿ  ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಗಂಭೀರ ಗಾಯಗೊಂಡಿದ್ದು ವಾಹನ ಜಖಂಗೊಂಡ ಘಟನೆ ಸೆ.19ರ ಗುರುವಾರ ಮುಂಜಾನೆ ನಡೆದಿದೆ.

Join Our Whatsapp Group

ಬಾಗಲಕೋಟೆಯಿಂದ ಮಂಗಳೂರಿನತ್ತ ತೆರಳುತ್ತಿದ್ದ ಈ ವಾಹನ ಬೆಳಗ್ಗೆ 4.30ರ ಸುಮಾರಿಗೆ ರಾಷ್ಟೀಯ ಹೆದ್ದಾರಿ 66ರ ಉದ್ಯಾವರ ಕಿಯಾ ಶೋ ರೂಂ ಮುಂಭಾಗದಲ್ಲಿ ಡಿಕ್ಕಿ ಹೊಡೆದಿದೆ. ಪರಿಸರದಲ್ಲಿ ವಿದ್ಯುತ್ ವ್ಯತ್ಯಯಗೊಂಡಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.