ಮಂಡ್ಯ: ಕೊಲೆ ಆರೋಪಿಗೆ ತಾಲೂಕು ಅಧ್ಯಕ್ಷ ಸ್ಥಾನ ನೀಡಿ ಕಸಾಪ ಎಡವಟ್ಟು ಮಾಡಿಕೊಂಡಿದೆ. ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿ ರೌಡಿಶೀಟರ್ ದೀಪು ಕೊಲೆ ಕೇಸ್ನ 24ನೇ ಆರೋಪಿ ಎಂ.ಬಿ.ಕುಮಾರ್ ಆಯ್ಕೆ ಆಗಿದ್ದಾರೆ.
ಶಾಸಕರ ಒತ್ತಡಕ್ಕೆ ಮಣಿದು ಎಂ.ಬಿ.ಕುಮಾರ್ ಗೆ ಕಸಾಪ ಅಧ್ಯಕ್ಷ ಸ್ಥಾನ ನೀಡಲಾಗಿದೆ ಎನ್ನಲಾಗುತ್ತಿದೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ ನಡೆಗೆ ಸಾಹಿತ್ಯಾಸಕ್ತರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಡಿಸೆಂಬರ್ನಲ್ಲಿ ನಡೆಯುವ ನುಡಿಜಾತ್ರೆಗೆ ಭರದ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಕೊಲೆ ಆರೋಪಿಗೆ ಅಧ್ಯಕ್ಷ ಸ್ಥಾನ ನೀಡಿ ಕಸಾಪ ಎಡವಟ್ಟು ಮಾಡಿಕೊಂಡಿದೆ. ಶಾಸಕನ ಒತ್ತಡಕ್ಕೆ ಮಣಿದ ಕನ್ನಡ ಸಾಹಿತ್ಯ ಪರಿಷತ್ ಕೊಲೆ ಆರೋಪಿಯನ್ನು ಕಸಾಪ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿ ಆಯ್ಕೆ ಮಾಡಿದೆ. 2015ರ ಜನವರಿ 3ರಂದು ರೌಡಿಶೀಟರ್ ದೀಪು ಹತ್ಯೆ ನಡೆದಿತ್ತು. ಈ ಪ್ರಕರಣದಲ್ಲಿ ಎಂ.ಬಿ.ಕುಮಾರ್ 24ನೇ ಆರೋಪಿಯಾಗಿದ್ದರು. ಸದ್ಯ ಜಾಮೀನಿನ ಮೇಲೆ ಹೊರಗಿದ್ದು ವಿಚಾರಣೆ ಎದುರಿಸುತ್ತಿದ್ದಾರೆ.
ಕುಮಾರ್ ಹಿನ್ನೆಲೆ ಗೊತ್ತಿದ್ದರೂ ಆತನ ಪರವಾಗಿ ಶಾಸಕರು ಶಿಫಾರಸು ಮಾಡಿದ್ದಾರೆ. ಕುಮಾರ್ನನ್ನು ಶ್ರೀರಂಗಪಟ್ಟಣ ಕಸಾಪ ಅಧ್ಯಕ್ಷರನ್ನಾಗಿ ಮಾಡಲು ಶ್ರೀರಂಗಪಟ್ಟಣ ಕ್ಷೇತ್ರದ ‘ಕೈ’ ಶಾಸಕ ರಮೇಶ್ ಬಂಡಿಸಿದ್ದೇಗೌಡ ಪತ್ರ ಬರೆದಿದ್ದಾರೆ. ಶಾಸಕರ ಒತ್ತಡಕ್ಕೆ ಮಣಿದ ಕಸಾಪ ಎಂ.ಬಿ.ಕುಮಾರ್ಗೆ ತಾಲೂಕು ಅಧ್ಯಕ್ಷ ಸ್ಥಾನ ನೀಡಿದೆ. ಕನ್ನಡ ಸಾಹಿತ್ಯ ಪರಿಷತ್ ನಡೆಗೆ ಸಾಹಿತ್ಯಾಸಕ್ತರಿಂದ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ತಾಲೂಕು ಅಧ್ಯಕ್ಷ ಸ್ಥಾನದಿಂದ ಎಂ.ಬಿ.ಕುಮಾರ್ ಕೆಳಗಿಳಿಸಲು ಆಗ್ರಹ ಕೇಳಿ ಬಂದಿದೆ. ಸದ್ಯ ದಾಖಲೆ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದು ಕಸಾಪ ಅಧ್ಯಕ್ಷ ಮಹೇಶ್ ಜೋಶಿ ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.