ಬೆಂಗಳೂರು, ಸೆ.19: ಕರ್ನಾಟಕದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಸಿದ್ದರಾಮಯ್ಯ ಸಿಎಂ ಆದಮೇಲೆ ಹಿಟ್ಲರ್ ಆಗಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕರಾದ ಹರೀಶ್ ಪೂಂಜ, ತೇಜಸ್ವಿ ಸೂರ್ಯ ಸೇರಿದಂತೆ ಅನೇಕ ಶಾಸಕ, ಸಂಸದರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಹಾಗೆಂದು ಕಾಂಗ್ರೆಸ್ ನಾಯಕ ಐವನ್ ಡಿಸೋಜಾ ನೀಡಿದ ಹೇಳಿಕೆ ಮೇಲೆ ಕ್ರಮ ಆಗಲಿಲ್ಲ ಎಂದರು.
ಪೊಲೀಸ್ ಅಧಿಕಾರಿ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿದ್ದರೂ ಕಾಂಗ್ರೆಸ್ ಶಾಸಕರ ಮೇಲೆ ಕ್ರಮ ಆಗಲಿಲ್ಲ. ಮಾಜಿ ಸಚಿವ ನಾಗೇಂದ್ರ ಹಗರಣದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಆದರೆ ಎಸ್ಐಟಿ ಚಾರ್ಜ್ಶೀಟ್ನಲ್ಲಿ ಅವರ ಹೆಸರೇ ಇಲ್ಲ. ರಾಜ್ಯವನ್ನು ಏನು ಮಾಡಲು ಹೊರಟಿದ್ದೀರಿ ಸಿದ್ದರಾಮಯ್ಯನವರೇ ಎಂದು ಶೋಭಾ ಪ್ರಶ್ನಿಸಿದರು.
ಗಣೇಶ ಮೂರ್ತಿಯನ್ನೇ ಪೊಲೀಸ್ ವ್ಯಾನ್ನಲ್ಲಿ ಕರೆದುಕೊಂಡು ಹೋದರು. ಇದು ದೇಶದಲ್ಲೇ ಮೊದಲು. ಗಣಪತಿಗೇ ವಿಘ್ನ ಮಾಡಿದರು. ಚಪ್ಪಲಿ ಬಿಸಾಡಿದರು, ಕಲ್ಲು ಎಸೆದರು, 25 ಅಂಗಡಿ ಸುಟ್ಟು ಹಾಕಿದರು. ಅವರಿಗೆ ಎಲ್ಲಿಂದ ಶಕ್ತಿ ಬಂತು? ಕೇರಳದವರು ಬಂದಿದ್ದಾರೆ ಎಂದಬುದು ಗೊತ್ತಾಗಿದೆ ಎಂದು ಶೋಭಾ ಆಕ್ರೋಶ ವ್ಯಕ್ತಪಡಿಸಿದರು.
ಕೋಲಾರದಲ್ಲಿ ಪ್ಯಾಲೆಸ್ಟೈನ್ ಧ್ವಜ ಪ್ರದರ್ಶನ ಆಗಿದೆ. ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ರಾಷ್ಟ್ರಧ್ವಜದ ಮೇಲೆ ಉರ್ದುವಿನಲ್ಲಿ ಬರೆದಿದ್ದಾರೆ. ಇದು ಕರ್ನಾಟಕದ ಸ್ಥಿತಿ. ಈ ಧೈರ್ಯ ಸಮಾಜ ದ್ರೋಹಿಗಳಿಗೆ ಹೇಗೆ ಬಂತು ಎಂದು ಶೋಭಾ ಪ್ರಶ್ನಿಸಿದರು.
ಸರ್ಕಾರ ಎಫ್ಐಆರ್ ಹಾಕಿದೆ, ಅದನ್ನು ನಾವು ಎದುರಿಸುತ್ತೇವೆ. ಪೊಲೀಸರು ನಮ್ಮನ್ನು ಬಂಧಿಸಬಹುದು, ನಾವು ಬಂಧನಕ್ಕೆ ಒಳಗಾಗುತ್ತೇವೆ. ನಾವು ಹೋರಾಟ ಮಾಡಿಕೊಂಡು ಬಂದವರು, ಹೋರಾಟ ಮುಂದುವರೆಸುತ್ತೇವೆ. ನಾವು ಗೊಡ್ಡು ಬೆದರಿಕೆಗೆ ಹೆದರಿಕೊಂಡು ಓಡಿ ಹೋಗಲ್ಲ. ಇದನ್ನೆಲ್ಲಾ ಕಾನೂನು ಮೂಲಕವೇ ಎದುರಿಸುತ್ತೇವೆ ಎಂದು ಶೋಭಾ ಹೇಳಿದರು.
ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ ವಿಚಾರವಾಗಿ ಪ್ರತಿಕ್ರಿಯಿಸಿ, ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ. ಉಪ್ಪು ತಿಂದವರು ನೀರು ಕುಡಿಯುತ್ತಾರೆ. ಅವರು ತಪ್ಪು ಮಾಡಿದ್ದರೆ ಕ್ರಮ ಆಗಲಿ. ನಾವು ತಪ್ಪು ಮಾಡಿದ ಯಾರನ್ನೂ ರಕ್ಷಣೆ ಮಾಡಲ್ಲ. ಆದರೆ ಸರಕಾರ ದ್ವೇಷದ ರಾಜಕೀಯ ಮಾಡುವುದು ಬೇಡ ಎಂದರು.
🎯 ರೈಲ್ವೆ ಟೆಕ್ನಿಷಿಯನ್ ನೇಮಕಾತಿ 2024 – 14,928 ಹುದ್ದೆಗಳು 🛠️
ಅರಿಶಿನ ಕುಂಕುಮದ ನೈಜ ಮಹತ್ವ ದೇವರ ದರ್ಶನಕ್ಕೂ, ಆರೋಗ್ಯಕ್ಕೂ 🌼✨
ಪ್ರಧಾನ ಮಂತ್ರಿ ಆವಾಸ್ ಯೋಜನೆಮನೆ ಕಟ್ಟಲು ಪಡೆಯಿರಿ ಸರ್ಕಾರದಿಂದ ಸಬ್ಸಿಡಿ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ಆರೋಗ್ಯ ಸಲಹೆ…..
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.