ಮನೆ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೈಸೂರು ಜಿಲ್ಲಾ ಪ್ರವಾಸ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೈಸೂರು ಜಿಲ್ಲಾ ಪ್ರವಾಸ

0

 ಮೈಸೂರು,ಸೆ.19: ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೆಪ್ಟೆಂಬರ್ 20 ಮತ್ತು 21 ರಂದು ಮೈಸೂರು ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಸೆಪ್ಟೆಂಬರ್ 20 ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿಗೆ ಆಗಮಿಸಲಿದ್ದಾರೆ.

Join Our Whatsapp Group

 ಸೆ.20 ರಂದು ಬೆಳಿಗ್ಗೆ 11.15 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮನ್ವಯ- ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಬೆಂಗಳೂರು ಇವರ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿರುವ “ಸುವರ್ಣ ಸಂಭ್ರಮ ಕರ್ನಾಟಕ 50 ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ, ಕರ್ನಾಟಕ ಸಾಂಸ್ಕೃತಿಕ ಮುನ್ನೋಟ:ಚಿಂತನಾ ಸಮಾವೇಶ” ದಲ್ಲಿ ಭಾಗವಹಿಸಲಿದ್ದಾರೆ

ಸೆಪ್ಟೆಂಬರ್ 21 ರಂದು ಬೆಳಗ್ಗೆ 10.30 ಗಂಟೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಮಾನಸ ಗಂಗೋತ್ರಿಯ ರಾಣಿಬಹದ್ದೂರ್ ಸಭಾಂಗಣದಲ್ಲಿ ಏರ್ಪಡಿಸಲಾಗಿರುವ ಪತ್ರಿಕಾ ದಿನಾಚರಣೆ 2024-ಹಿರಿಯ ಪತ್ರಕರ್ತರಿಗೆ ಅಭಿನಂದನೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.