ಬೆಂಗಳೂರು: ಮುಡಾ ಹಗರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರು ಇದೀಗ ಅದೇ ಪ್ರಕರಣದಲ್ಲಿ ದಾಖಲಾಗಿರುವ ಮತ್ತೊಂದು ದೂರಿಗೆ ಸಂಬಂಧಿಸಿ ಸರ್ಕಾರದಿಂದ ವರದಿ ಕೇಳಿದ್ದಾರೆ. ಸಿದ್ದರಾಮಯ್ಯ ಮೇಲಿನ ದೂರಿನ ವಿವರಣೆ ಕೇಳಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪತ್ರ ಬರೆದಿದ್ದಾರೆ.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಮೂಲದ ಪಿಎಸ್ ನಟರಾಜ್ ಎಂಬವರು ಆಗಸ್ಟ್ 27ರಂದು ರಾಜ್ಯಪಾಲರಿಗೆ ದೂರು ನೀಡಿದ್ದರು.
ರಾಜ್ಯಪಾಲರ ಪತ್ರದಲ್ಲೇನಿದೆ?
ಮೈಸೂರಿನ ಪಿಎಸ್ ನಳರಾಜ್ ಎಂಬವರು ದಿನಾಂಕ 27-08-2024 ರಂದು ವಿವರವಾದ ಪ್ರಾತಿನಿಧ್ಯವನ್ನು ಸಲ್ಲಿಸಿದ್ದು ಮುಖ್ಯಮಂತ್ರಿಗಳ ವಿರುದ್ಧ ಆರೋಪ ಮಾಡಿರುತ್ತಾರೆ. ಇದರಲ್ಲಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಮುಖ್ಯಮಂತ್ರಿಗಳ ಮೌಖಿಕ ಸೂಚನೆಯ ಮೇರೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯಿದೆ 1987ರ ಕಲಂ 15 ಮತ್ತು 25ರ ಅನ್ನು ಉಲ್ಲಂಘಿಸಿ ಸಿಎಂ ಕ್ಷೇತ್ರವಾದ ವರುಣಾ ಹಾಗೂ ಶ್ರೀರಂಗಪಟ್ಟಣದಲ್ಲಿ 387 ಕೋಟಿ ರೂ.ಗಳ ಕಾಮಗಾರಿ ಹಮ್ಮಿಕೊಂಡಿತ್ತು ಎಂದು ಉಲ್ಲೇಖಿಸಲಾಗಿದೆ. ಪ್ರಾಧಿಕಾರದಲ್ಲಿ ಹಣ ಇಲ್ಲದಿದ್ದರೂ ಮುಖ್ಯಮಂತ್ರಿಗಳ ಮೌಖಿಕ ಸೂಚನೆ ಮೇರೆಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅರ್ಜಿದಾರರು ತಿಳಿಸಿದ್ದಾರೆ. ಅಲ್ಲದೆ, ಈ ಮೂಲಕ ಪ್ರಾಧಿಕಾರ ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಸಿಬಿಐನಿಂದ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ ಎಂದು ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಮುಖ್ಯಮಂತ್ರಿಗಳ ವಿರುದ್ಧ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿರುವುದರಿಂದ, ಆದಷ್ಟು ಬೇಗ ಈ ವಿಷಯವನ್ನು ಪರಿಶೀಲಿಸಲು ಮತ್ತು ವಿವರವಾದ ವರದಿಯನ್ನು ದಾಖಲೆಗಳೊಂದಿಗೆ ಸಲ್ಲಿಸಲು ನಿರ್ದೇಶಿಸಲಾಗಿದೆ ಎಂದು ರಾಜ್ಯಪಾಲರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
🎯 ರೈಲ್ವೆ ಟೆಕ್ನಿಷಿಯನ್ ನೇಮಕಾತಿ 2024 – 14,928 ಹುದ್ದೆಗಳು 🛠️
ಅರಿಶಿನ ಕುಂಕುಮದ ನೈಜ ಮಹತ್ವ ದೇವರ ದರ್ಶನಕ್ಕೂ, ಆರೋಗ್ಯಕ್ಕೂ 🌼✨
ಪ್ರಧಾನ ಮಂತ್ರಿ ಆವಾಸ್ ಯೋಜನೆಮನೆ ಕಟ್ಟಲು ಪಡೆಯಿರಿ ಸರ್ಕಾರದಿಂದ ಸಬ್ಸಿಡಿ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ಆರೋಗ್ಯ ಸಲಹೆ…..
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.