ಮಂಡ್ಯ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂ ಧಿಸಿದಂತೆ ನಾಗಮಂಗಲ ಉಪವಿಭಾಗದ ಡಿವೈಎಸ್ಪಿ ಡಾ.ಸುಮಿತ್ ಅವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಮಲ್ಲಿಕಾರ್ಜುನ ಬಾಲದಂಡಿ ಆದೇಶ ಹೊರಡಿಸಿದ್ದಾರೆ.
ಈಗಾಗಲೇ ಪ್ರಕರಣ ಸಂಬಂಧ ನಾಗಮಂಗಲ ಟೌನ್ ಇನ್ಸ್‌ಪೆಕ್ಟರ್ ಅಶೋಕ್‌ಕುಮಾರ್ ಅಮಾನತು ಮಾಡಲಾಗಿತ್ತು.
ಇದೀಗ ಕರ್ತವ್ಯ ನಿರ್ಲಕ್ಷ್ಯ ಹಿನ್ನೆಲೆಯಲ್ಲಿ ಡಿವೈಎಸ್‌ಪಿ ಡಾ.ಸುಮಿತ್ ಅವರನ್ನು ಅಮಾನತು ಮಾಡಲಾಗಿದೆ. ಡಾ.ಸುಮಿತ್ ಅವರ ಜಾಗಕ್ಕೆ ಶಿವಮೂರ್ತಿ ಅವರನ್ನು ಪ್ರಭಾರ ಡಿವೈಎಸ್ಪಿ ಆಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.