ಮನೆ ರಾಷ್ಟ್ರೀಯ ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

0

ಕೊಲ್ಕತ್ತಾ: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ವಿರೋಧಿಸಿ ಕಿರಿಯ ವೈದ್ಯರು ಕಳೆದ 41 ದಿನಗಳಿಂದ ನಡೆಸುತ್ತಿದ್ದ ಪ್ರತಿಭಟನೆಯನ್ನು ಕೊಂಚ ಸಡಿಲಿಕೆ ಮಾಡಿ ಶನಿವಾರದಿಂದ (ಸೆ. 21) ತುರ್ತು ಸೇವೆಗಳನ್ನು ಪುನರಾರಂಭಿಸಲು ನಿರ್ಧರಿಸಿದ್ದಾರೆ.

Join Our Whatsapp Group

ಕೋಲ್ಕತ್ತಾ ಅತ್ಯಾಚಾರ – ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ತ್ವರಿತಗತಿಯಲ್ಲಿ ನಡೆಸುವಂತೆ ಆಗ್ರಹಿಸಿ ವೈದ್ಯರು ಇಂದು ಮಧ್ಯಾಹ್ನ 3 ಗಂಟೆಗೆ ಸ್ವಾಸ್ಥ್ಯ ಭವನದಿಂದ ಸಿಬಿಐ ಕಚೇರಿವರೆಗೆ ರ‍್ಯಾಲಿ ನಡೆಸಲಿದ್ದಾರೆ.

ಈ ಕುರಿತು ಹೇಳಿಕೆ ನೀಡಿದ ಕಿರಿಯ ವೈದ್ಯರು ಇಂದು ಮಧ್ಯಾಹ್ನ 3 ಗಂಟೆಗೆ ಸಿಬಿಐ ಕಚೇರಿವರೆಗೆ ರ‍್ಯಾಲಿ ನಡೆಸಿ ಕೊಲೆ ಮತ್ತು ಅತ್ಯಾಚಾರ ಪ್ರಕರಣವನ್ನು ಸಿಬಿಐ ತ್ವರಿತಗತಿಯಲ್ಲಿ ನಡೆಸಬೇಕು ಎಂದು ಆಗ್ರಹಿಸುತ್ತೇವೆ ಜೊತೆಗೆ ನಾಳೆಯಿಂದ (ಸೆ. 21) ತುರ್ತು ಸೇವೆಗೆ ಪುನರಾರಂಭಿಸಲಾಗುದು ಎಂದು ಹೇಳಿದ್ದಾರೆ, ಕಳೆದ ಕೆಲ ದಿನಗಳಿಂದ ಸುರಿದ ಮಳೆಯಿಂದ ಪ್ರವಾಹ ಸಂಭವಿಸಿದ್ದು ಹಲವಾರು ಮಂದಿ ಸಂಕಷ್ಟಕ್ಕೀಡಾಗಿದ್ದಾರೆ ರೋಗಿಗಳಿಗೆ ತುರ್ತು ಚಿಕಿತ್ಸೆಯ ಅವಶ್ಯಕತೆ ಇದೆ ಹಾಗಾಗಿ ಸೇವೆ ಪುನರಾರಂಭಗೊಳಿಸಲಾಗುವುದು ಎಂದು ಹೇಳಿದ್ದಾರೆ. ಜೊತೆಗೆ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಹೇಳಿದರು.