ಮನೆ ರಾಜ್ಯ ರಾಜ್ಯದಲ್ಲಿ 196 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 196 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru)- ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 196 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,51,498ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,064 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
125 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,09,494ಕ್ಕೆ ಏರಿಕೆಯಾಗಿದೆ. ಇನ್ನು 1,898 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 175 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,87,148ಕ್ಕೆ ಏರಿಕೆಯಾಗಿದೆ.