ಮನೆ ರಾಜ್ಯ ಸೆ. 24ರಂದು ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ: ಸಚಿವ ಕೆ.ಜೆ.ಜಾರ್ಜ್

ಸೆ. 24ರಂದು ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ: ಸಚಿವ ಕೆ.ಜೆ.ಜಾರ್ಜ್

0

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನಿರ್ಮಿತ, ರಾಜ್ಯದ ಮೊಟ್ಟ ಮೊದಲ 370 ಮೆಗಾ ವ್ಯಾಟ್ ಸ್ಥಾಪಿತ ಸಾಮರ್ಥ್ಯದ ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಸೆ. 24ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಇಂಧನ ಸಚಿವ ಕೆ.ಜಾ.ಜಾರ್ಜ್ ಹೇಳಿದ್ದಾರೆ.

Join Our Whatsapp Group

ಕರ್ಟೈನ್ ರೈಸರ್ ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, “ಕೆಪಿಸಿಎಲ್ ತನ್ನ ಅಂಗಸಂಸ್ಥೆಯಾದ ‘ಕೆಪಿಸಿ ಗ್ಯಾಸ್ ಪವರ್ ಕಾರ್ಪೊರೇಷನ್ ಲಿಮಿಟೆಡ್’ ಮೂಲಕ ಯಲಹಂಕದ ಕೆಪಿಸಿಎಲ್ ಯೋಜನಾ ಪ್ರದೇಶದಲ್ಲಿ ಈ ವಿದ್ಯುತ್ ಸ್ಥಾವರನ್ನು ಸ್ಥಾಪಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆ. 24ರಂದು ಸಂಜೆ 5 ಗಂಟೆಗೆ ಲೋಕಾರ್ಪಣೆ ಮಾಡಲಿದ್ದಾರೆ.

 ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಯಲಹಂಕ ಕ್ಷೇತ್ರದ ಶಾಸಕ ಎಸ್.ಆರ್. ವಿಶ್ವನಾಥ್ ಅಧ್ಯಕ್ಷತೆ ವಹಿಸುವರು”, ಎಂದು ತಿಳಿಸಿದರು.

“ಒಟ್ಟು 370 ಮೆ.ವ್ಯಾ. ಸಾಮರ್ಥ್ಯದ ‘ಯಲಹಂಕ ಸಂಯೋಜಿತ ಆವರ್ತ ವಿದ್ಯುತ್‌ ಸ್ಥಾವರ (ಕಂಬೈನ್ಡ್ ಸೈಕಲ್ ಪವರ್ ಪ್ಲಾಂಟ್)ಅನ್ನು ಸುಮಾರು 2,500 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಗ್ಯಾಸ್ ಮತ್ತು ಸ್ಟೀಮ್ ಮೂಲಕ ವಿದ್ಯುತ್ ಉತ್ಪಾದನೆ ಮಾಡುತ್ತಿರುವುದು ಇದರ ವಿಶೇಷತೆ. ಗ್ಯಾಸ್ ಟರ್ಬೈನ್ ಮೂಲಕ 237 ಮೆ.ವ್ಯಾ. ಮತ್ತು ಸ್ಟೀಮ್ ಟರ್ಬೈನ್ ಮೂಲಕ 133 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಇದು ಬೆಂಗಳೂರು ಸಮೀಪ ಸ್ಥಾಪಿಸಿರುವ ಮೊದಲ ವಿದ್ಯುತ್ ಉತ್ಪಾದನಾ ಸ್ಥಾವರವಾಗಿದೆ”, ಎಂದು ಮಾಹಿತಿ ನೀಡಿದರು.

“ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ 2014ರ ಜು. 28ರಂದು ವಿದ್ಯುತ್ ಸ್ಥಾವರ ಅನುಷ್ಠಾನಕ್ಕೆ ಅನುಮೋದನೆ ನೀಡಲಾಗಿತ್ತು. ಪ್ರಸ್ತುತ ಉಪಮುಖ್ಯಮಂತ್ರಿಗಳಾಗಿರುವ ಡಿ.ಕೆ.ಶಿವಕುಮಾರ್ ಅವರು ಇಂಧನ ಸಚಿವರಾಗಿದ್ದಾಗ 2016ರಲ್ಲಿ ಸ್ಥಾವರಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಘಟಕದ ಕಾರ್ಯಾಚರಣೆಗೆ ಇದ್ದ ಅಡೆತಡೆಗಳನ್ನು ನಿವಾರಿಸಲಾಗಿದ್ದು, ಕಳೆದ ಆಗಸ್ಟ್ 8ರಂದು ಪೂರ್ಣ ಲೋಡ್ 370 ಮೆ. ವ್ಯಾ. (20 ಗಂಟೆಗಳ) ನಿರಂತರ ಸಂಯುಕ್ತ ಆವರ್ತ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಇದೀಗ ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಗುತ್ತಿದೆ”, ಎಂದು ಹೇಳಿದರು.

ಕರ್ಟನ್ ರೈಸರ್ ಸಮಾರಂಭದಲ್ಲಿ ಮಾತನಾಡಿದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, “ರಾಜ್ಯದ ವಿದ್ಯುತ್‌ ಉತ್ಪಾದನೆ ಸಾಮರ್ಥ್ಯವನ್ನು ವಿಸ್ತರಿಸಲು ಬದ್ಧವಾಗಿ ಈ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ನಮ್ಮ ಇಂಧನ ಸಚಿವರಾದ ಕೆ.ಜೆ.ಜಾರ್ಜ್‌ ಹಾಗೂ ಕೆಪಿಸಿಎಲ್‌ನ ಪ್ರಯತ್ನದಿಂದಾಗಿ ನೂತನ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಸ್ಥಾಪನೆಯಾಗುತ್ತಿದೆ. ಇದರಿಂದ ರಾಜ್ಯದ ವಿದ್ಯುತ್‌ ಉತ್ಪಾದನೆ ಸಾಮರ್ಥ್ಯ ಹೆಚ್ಚಳದ ಜತೆಗೆ ಗುಣಮಟ್ಟದ ವಿದ್ಯುತ್‌ ಪೂರೈಕೆ ಸಾಧ್ಯವಾಗಲಿದೆ. ಸುಸ್ಥಿರ ಇಂಧನ ಭವಿಷ್ಯದ ಕಡೆಗೆ ಇದು ಪ್ರಮುಖ ಮೈಲಿಗಲ್ಲಾಗಲಿದೆ,” ಎಂದರು.

“ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದಾಗ 2014ರ ಜು. 28ರಂದು ವಿದ್ಯುತ್ ಸ್ಥಾವರ ಅನುಷ್ಠಾನಕ್ಕೆ ಅನುಮೋದನೆ ನೀಡಲಾಗಿತ್ತು. ಪ್ರಸ್ತುತ ಉಪಮುಖ್ಯಮಂತ್ರಿಗಳಾಗಿರುವ ಡಿ.ಕೆ.ಶಿವಕುಮಾರ್ ಅವರು ಇಂಧನ ಸಚಿವರಾಗಿದ್ದಾಗ 2016ರಲ್ಲಿ ಸ್ಥಾವರಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಘಟಕದ ಕಾರ್ಯಾಚರಣೆಗೆ ಇದ್ದ ಅಡೆತಡೆಗಳನ್ನು ನಿವಾರಿಸಲಾಗಿದ್ದು, ಕಳೆದ ಆಗಸ್ಟ್ 8ರಂದು ಪೂರ್ಣ ಲೋಡ್ 370 ಮೆ. ವ್ಯಾ. (20 ಗಂಟೆಗಳ) ನಿರಂತರ ಸಂಯುಕ್ತ ಅವರ್ತ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಇದೀಗ ಅಧಿಕೃತವಾಗಿ ಲೋಕಾರ್ಪಣೆ ಮಾಡಲಾಗುತ್ತಿದೆ”, ಎಂದು ಹೇಳಿದರು.

ಕರ್ಟನ್ ರೈಸರ್ ಸಮಾರಂಭದಲ್ಲಿ ಮಾತಾನಾಡಿದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, “ರಾಜ್ಯದ ವಿದ್ಯುತ್ ಉತ್ಪಾದನೆ ಸಾಮರ್ಥ್ಯವನ್ನು ವಿಸ್ತರಿಸಲು ಬದ್ಧವಾಗಿ ಈ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ನಮ್ಮ ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಹಾಗೂ ಕೆಪಿಸಿಎಲ್‌ನ ಪ್ರಯತ್ನದಿಂದಾಗಿ ನೂತನ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರ ಸ್ಥಾಪನೆಯಾಗುತ್ತಿದೆ. ಇದರಿಂದ ರಾಜ್ಯದ ವಿದ್ಯುತ್ ಉತ್ಪಾದನೆ ಸಾಮರ್ಥ್ಯ ಹೆಚ್ಚಳದ ಜತೆಗೆ ಗುಣಮಟ್ಟದ ವಿದ್ಯುತ್ ಪೂರೈಕೆ ಸಾಧ್ಯವಾಗಲಿದೆ.‌ ಸುಸ್ಥಿರ ಇಂಧನ ಭವಿಷ್ಯದ ಕಡೆಗೆ ಇದು ಪ್ರಮುಖ ಮೈಲಿಗಲ್ಲಾಗಲಿದೆ,” ಎಂದರು.

ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್‌ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಕೆಪಿಸಿಎಲ್ ಮಾನವ ಸಂಪನ್ಮೂಲ ನಿರ್ದೇಶಕ ಸಿ‌.ನಾಗರಾಜು, ಹಣಕಾಸು ನಿರ್ದೇಶಕ ಆರ್.ನಾಗರಾಜ, ತಾಂತ್ರಿಕ‌ ನಿರ್ದೇಶಕ ಎಸ್.ಕೃಷ್ಣಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.