ಮನೆ ಕಾನೂನು ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು

ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು

0

ಬೆಳಗಾವಿ: ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಕೇವಲ ಐದು ದಿನಗಳಲ್ಲಿ 9 ಜನ ಆರೋಪಿಗಳಿಗೆ ತಲಾ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವ ಮೂಲಕ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ಶೀಘ್ರಗತಿ ಫೋಕ್ಸೋ ನ್ಯಾಯಾಲಯದ ನ್ಯಾಯಾಧೀಶರು ಮಹತ್ವದ ತೀರ್ಪು ನೀಡುವ ಮೂಲಕ ಸಮಾಜದಕ್ಕೆ ಉತ್ತಮ ಸಂದೇಶ ನೀಡಿದ್ದಾರೆ.

Join Our Whatsapp Group

ಬಾಲಕಿಯರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು ಕೇವಲ ಐದು ದಿನಗಳ ಅವಧಿಯಲ್ಲಿ ಮಹತ್ವದ ತೀರ್ಪು ನೀಡಿದ್ದಾರೆ. ನಾಲ್ಕು ಪ್ರತ್ಯೇಕ ಪ್ರಕರಣಗಳ ವಿಚಾರಣೆ ನಡೆಸಿ 20 ವರ್ಷ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ವಿಶೇಷ ಅಭಿಯೋಜಕ ಎಲ್.ವಿ. ಪಾಟೀಲ ವಕಾಲತ್ತು ವಹಿಸಿ ಸಮರ್ಪಕವಾಗಿ ವಾದ ಮಂಡಿಸಿ ಬಾಲಕಿಯರಿಗೆ ನ್ಯಾಯ ಒದಗಿಸಿ ಕೊಟ್ಟಿದ್ದಾರೆ.

ಸೋಮವಾರ ಒಂದೇ ದಿನದಲ್ಲಿ ರಾಯಬಾಗದ ಇಬ್ಬರು ಆರೋಪಿಗಳಿಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಲಾಗಿದೆ. 29 ಏಪ್ರಿಲ್ 2018ರಂದು ರಾಯಬಾಗದ ಅರ್ಬಾಜ್ ರಸೂಲ್ ನಾಲಬಂದ್(19) ಎಂಬ ಯುವಕ ಬಾಲಕಿಯನ್ನು ಬೈಕ್ ಮೇಲೆ ಕೂರಿಸಿಕೊಂಡು ಮನೆಗೆ ಬಿಡುವುದಾಗಿ ಹೇಳಿ ಅರಣ್ಯ ದಿಗ್ಗೇವಾಡಿ ಕ್ರಾಸ್ ಬಳಿಕ ಅಂಕಲಿಯ ಅರಣ್ಯ ಪ್ರದೇಶದಲ್ಲಿ ಅತ್ಯಾಚಾರ ಎಸಗಿದ್ದನು. ರಾಯಬಾಗ ಠಾಣೆಯಲ್ಲಿ ದಊರು ದಾಖಲಾಗಿತ್ತು. ತನಿಖಾಧಿಕಾರಿಯಾದ ಮಂಜುನಾಥ ನಡುವಿನಮನಿ, ಪ್ರೀತಂ ದತ್ತಾ ಶ್ರೇಯಕರ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. 17 ಸಾಕ್ಷಿ, 41 ದಾಖಲೆ, 8 ಮುದ್ದೆಮಾಲುಗಳ ಆಧಾರದ ಮೇಲೆ ಶಿಕ್ಷೆ ವಿಧಿಸಲಾಗಿದೆ.

29 ಡಿಸೆಂಬರ್ 2016ರಂದು ಶಾಲೆಯಿಂದ ಬರುತ್ತಿದ್ದ ಬಾಲಕಿಯನ್ನು ಪರಿಚಯ ಮಾಡಿಕೊಂಡ ಯುವಕ ರಾಯಬಾಗದ ಆಶೀಷ ಧರ್ಮರಾಜ ಕಾಂಬಳೆ(25) ಮಹಾರಾಷ್ಟçದ ಗಣೇಶವಾಡಿಗೆ ಕರೆದುಕೊಂಡು ಹೋಗಿ ಮನೆಯೊಂದರಲ್ಲಿ ಕೂಡಿ ಹಾಕಿ ಅತ್ಯಾಚಾರ ಎಸಗಿದ್ದನು. ಬಾಲಕಿಯ ತಂದೆ ರಾಯಬಾಗ ಠಾಣೆಗೆ ದೂರು ನೀಡಿದ್ದರು. ತನಿಖಾಧಿಕಾರಿಯಾದ ಬಿ.ಎಸ್. ಲೋಕಾಪುರ, ಪ್ರೀತಂ ದತ್ತಾ ಶ್ರೇಯಕರ ದೋಚಾರೋಪಣೆ ಪಟ್ಟಿ ಸಲ್ಲಿಸಿದ್ದರು. 25 ಸಾಕ್ಷಿ, 40 ದಾಖಲೆ, 10 ಮುದ್ದೆಮಾಲುಗಳ ಆಧಾರದ ಮೇಲೆ ಆರೋಪಿಗೆ 20 ವರ್ಷ ಶಿಕ್ಷೆ ವಿಧಿಸಲಾಗಿದೆ. ಸರ್ಕಾರಿ ವಿಶೇಷ ಅಭಿಯೋಜಕ ಎಲ್.ವಿ. ಪಾಟೀಲ ವಾದ ವಡಿಸಿದ್ದಾರೆ.

ಚಿಕ್ಕೋಡಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿಯೂ ಆರು ಮಂದಿಗೆ ಸೆ. 19ರಂದು ಹಾಗೂ ಕುಡಚಿ ಠಾಣಾ ವ್ಯಾಪ್ತಿಯ ವಿಕ್ರಮ ಪಟ್ಟೇಕರ ಎಂಬಾತನಿಗೆ ಸೆ. 21ರಂದು ಶಿಕ್ಷೆ ವಿಧಿಸಿ ಆದೇಶ ಹೊರಡಿಸಲಾಗಿತ್ತು.