ಮನೆ ರಾಷ್ಟ್ರೀಯ ದೇಶದಲ್ಲಿ 2,828 ಕೋವಿಡ್‌ ಪಾಸಿಟಿವ್‌

ದೇಶದಲ್ಲಿ 2,828 ಕೋವಿಡ್‌ ಪಾಸಿಟಿವ್‌

0

ನವದೆಹಲಿ (New Delhi)- ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 2,828 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 14 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,31,53,043ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,586ಕ್ಕೆ ಏರಿಕೆಯಾಗಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,035 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,26,11,370ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 17,087 ಇದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 4,47,637 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈವರೆಗೂ 84,93,24,833 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,93,28,44,077  ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.