ಮನೆ ಅಪರಾಧ ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ ಅಧಿಕಾರಿಗಳು

ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ ಅಧಿಕಾರಿಗಳು

0

ಬೆಂಗಳೂರು ಗ್ರಾಮಾಂತರ: ಆನೇಕಲ್  ತಾಲೂಕಿನ ಜಿಗಣಿಯಲ್ಲಿದ್ದ ಶಂಕಿತ ಉಗ್ರನನ್ನು ನಿನ್ನೆ(ಸೆ.25) ಅಸ್ಸಾಂನ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.

Join Our Whatsapp Group

ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಆರೋಪಿ. ಉಲ್ಫಾ ಸಂಘಟನೆಗೆ ಸೇರಿರುವ ಶಂಕಿತ ಉಗ್ರ ಇವನಾಗಿದ್ದು, ಆಗಸ್ಟ್​ನಲ್ಲಿ ಗುವಾಹಟಿಯಲ್ಲಿಯೇ ಐದು IED ಬಾಂಬ್ ಇಟ್ಟು, ಕುಟುಂಬ ಸಮೇತ ಬೆಂಗಳೂರಿಗೆ ಬಂದು ವಾಸವಾಗಿದ್ದ. ಬಳಿಕ ಶಂಕಿತ ಉಗ್ರ ಖಾಸಗಿ ಕಂಪನಿಯಲ್ಲಿ ಗೌತಮ್ ಎನ್ನುವ ಹೆಸರಲ್ಲಿ ಸೆಕ್ಯೂರಿಟಿಯಾಗಿ ಕೆಲಸಕ್ಕೆ ಸೇರಿದ್ದನು.

ಈ ಬಗ್ಗೆ ಪಕ್ಕಾ ಮಾಹಿತಿ ಆಧರಿಸಿದ ಅಸ್ಸಾಂ ಎನ್ಐಎ ಟೀಂ, ಶಂಕಿತ ಉಗ್ರನನ್ನು ಇದೀಗ ಬಂಧಿಸಿದೆ. ಬೆಂಗಳೂರಿನ ಜಿಗಣಿಯಲ್ಲಿ ವಾಸವಿದ್ದ ಈ ಶಂಕಿತ ಉಗ್ರ, ಇಲ್ಲಿಯೂ ಒಂದಷ್ಟು ಪ್ಲ್ಯಾನ್​ಗಳನ್ನು ನಡೆಸುತ್ತಿದ್ದ ಅನುಮಾನ ವ್ಯಕ್ತವಾಗಿದೆ.

ಸದ್ಯ ಶಂಕಿತನನ್ನ ಬಂಧಿಸಿರೋ ಅಧಿಕಾರಿಗಳು, ಬಂಧಿತನಿಂದ ಮೊಬೈಲ್ ಮತ್ತು ಒಂದಷ್ಟು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ಇದೀಗ ಆತನನ್ನು ಎನ್ಐಎ ತಂಡ ಅಸ್ಸಾಂಗೆ ಕರೆದೊಯ್ದಿದೆ.