ಬೆಂಗಳೂರು: ಪರೀಕ್ಷಾರ್ಥಿಗಳು ಕಾತರದಿಂದ ಕಾಯುತ್ತಿದ್ದ 402 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಅಕ್ಟೋಬರ್ 3ರಂದು ಕ್ಯಾಮರಾ ಕಣ್ಗಾವಲಿನಲ್ಲಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.
ಈ ಹಿನ್ನಲೆ ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿ ಒಟ್ಟು 163 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.
ಪರೀಕ್ಷೆಗೆ ಅರ್ಹರಾಗಿರುವ 66,990 ಅಭ್ಯರ್ಥಿಗಳು
ಇನ್ನು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಯನ್ನು ಬರೆಯಲು 66,990 ಅರ್ಹರಾಗಿದ್ದು, ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ ಮಾಡಲಾಗಿದೆ. ಈ ಹಿನ್ನಲೆ ಪರೀಕ್ಷಾರ್ಥಿಗಳು ಅರ್ಧ ಗಂಟೆ ಮೊದಲೇ ಕೇಂದ್ರದೊಳಗೆ ಇರಬೇಕು. ಒಮ್ಮೆ ಒಳಗೆ ಹೋದರೆ ಪರೀಕ್ಷೆ ಮುಗಿದ ನಂತರವೇ ಹೊರಬರಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ತಿಳಿಸಿದ್ದಾರೆ.
ಅಭ್ಯರ್ಥಿಗಳು ಬೇಗ ಬಂದು ಪೊಲೀಸರ ತಪಾಸಣೆಗೆ ಒಳಪಡಬೇಕು. ತಡವಾಗಿ ಬರುವವರಿಗೆ ಪ್ರವೇಶ ಇರುವುದಿಲ್ಲ. ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಎಚ್ಚರಿಸಿದ್ದಾರೆ.
ಕಮಾಂಡ್ ಸೆಂಟರ್ ಸ್ಥಾಪನೆ
ಕಳದ ಬಾರಿ ಆದ ಅಕ್ರಮದ ಹಿನ್ನಲೆ ಈ ಬಾರಿ ಬೀಗಿಭದ್ರತೆ ಮಾಡಲಾಗಿದ್ದು, ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ. ಅದರಂತೆ ಎಲ್ಲಾ ಪರೀಕ್ಷಾ ಕೊಠಡಿಯನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಇದನ್ನು ಎಲ್ಲಾ ಜಿಲ್ಲಾ ಮಟ್ಟದಲ್ಲಿ ಕೂಡ ಒಂದು ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ. ಇನ್ನು ಪ್ರಶ್ನೆ ಪತ್ರಿಕೆ ಬಂಡಲ್ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ.
ಯಾರದೊ ಹೆಸರಿನಲ್ಲಿ ಬೇರೆ ಯಾರೋ ಪರೀಕ್ಷೆ ಬರೆಯುವುದನ್ನು ತಡೆಯಲು ಈ ಬಾರಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ವೇಳೆ ಅವರ ಬೆರಳಚ್ಚು ಮತ್ತು ಭಾವಚಿತ್ರವನ್ನು ತೆಗೆದುಕೊಂಡು ಅವರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಗತ್ತಿಸಿರುವ ಚಿತ್ರದ ಜೊತೆಗೆ ಆನ್ಲೈನ್ನಲ್ಲಿ ಹೊಂದಾಣಿಕೆ ಮಾಡುವ ವ್ಯವಸ್ಥೆ ಮಾಡಲಾಗಿದೆ.
🎯 ರೈಲ್ವೆ ಟೆಕ್ನಿಷಿಯನ್ ನೇಮಕಾತಿ 2024 – 14,928 ಹುದ್ದೆಗಳು 🛠️
ಅರಿಶಿನ ಕುಂಕುಮದ ನೈಜ ಮಹತ್ವ ದೇವರ ದರ್ಶನಕ್ಕೂ, ಆರೋಗ್ಯಕ್ಕೂ 🌼✨
ಪ್ರಧಾನ ಮಂತ್ರಿ ಆವಾಸ್ ಯೋಜನೆಮನೆ ಕಟ್ಟಲು ಪಡೆಯಿರಿ ಸರ್ಕಾರದಿಂದ ಸಬ್ಸಿಡಿ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ಆರೋಗ್ಯ ಸಲಹೆ…..
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.