ಮನೆ ರಾಜ್ಯ ರಾಜ್ಯಾದ್ಯಂತ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ

ರಾಜ್ಯಾದ್ಯಂತ ನಾಳೆಯಿಂದ ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭ

0

ಬೆಂಗಳೂರು: ನಾಳೆಯಿಂದ ನವರಾತ್ರಿ ಶುರುವಾಗುತ್ತಿದೆ. ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಸದ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20ರ ತನಕ ದಸರಾ ರಜೆ ಘೋಷಿಸಿದ್ದು, ನಾಳೆಯಿಂದಲೇ ಮಕ್ಕಳಿಗೆ ದಸರಾ ರಜೆ ಆರಂಭವಾಗಲಿದೆ. ಒಟ್ಟು 17 ದಿನ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಇರಲಿದೆ.

Join Our Whatsapp Group

2024-25ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಅಕ್ಟೋಬರ್ 3 ರಿಂದ 20 ರವರೆಗೆ ಇರಲಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇದ್ದು, ಕಾರ್ಯಕ್ರಮದ ನಂತರ ರಜೆಗಳು ಆರಂಭವಾಗಲಿದೆ. ಇನ್ನು ದಸರಾ ರಜೆ ಬಳಿಕ ಅಕ್ಟೋಬ‌ರ್ 21ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ಶಾಲೆ ನಡೆಯಲಿದೆ. 2024- 2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ.

ಕರ್ನಾಟಕದಲ್ಲಿ 2024-25ರ ಶೈಕ್ಷಣಿಕ ವರ್ಷವು ಮೇ 29ರಿಂದ ಪ್ರಾರಂಭವಾಗಿದ್ದು, ಮೊದಲ ಅವಧಿಯು ಅಕ್ಟೋಬರ್​​ 2ರ ತನಕ ಇತ್ತು. ಸೆಪ್ಟೆಂಬರ್​ 23ರಿಂದ ಮಧ್ಯಂತರ ಪರೀಕ್ಷೆಗಳು ಶುರುವಾಗಿ ಸೆಪ್ಟೆಂಬರ್​ 30ರ ತನಕ ನಡೆದಿವೆ. ಆ ಬಳಿಕ ಸರ್ಕಾರಿ ಮತ್ತು ಖಾಸಗಿ ಶಾಲಾ ಮಕ್ಕಳಿಗೆ ದಸರಾ ರಜೆ ಪ್ರಕ್ರಿಯೆ ಶುರುವಾಗಿದೆ. ಅಕ್ಟೋಬರ್​ 2ರಂದು ಎಲ್ಲಾ ಶಾಲೆಗಳಲ್ಲೂ ಗಾಂಧಿ ಜಯಂತಿ ಆಚರಿಸಿದ ಮರು ದಿನದಿಂದ ಶಾಲಾ ಮಕ್ಕಳಿಗೆ ದಸರಾ ರಜೆ ನೀಡಲಾಗಿದೆ. ಅಕ್ಟೋಬರ್​ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.