ಮನೆ ಅಪರಾಧ ಬಿಹಾರದ ಆರ್‌ ಜೆಡಿ ಮುಖಂಡನ ಮೇಲೆ ಗುಂಡಿನ ದಾಳಿ

ಬಿಹಾರದ ಆರ್‌ ಜೆಡಿ ಮುಖಂಡನ ಮೇಲೆ ಗುಂಡಿನ ದಾಳಿ

0

ಪಟ್ನಾ: ಬಿಹಾರದ ಆರ್‌ ಜೆಡಿ ಮುಖಂಡ ಪಂಕಜ್ ಯಾದವ್ ಮೇಲೆ ದುಷ್ಕರ್ಮಿಗಳು ಗುರುವಾರ ಬೆಳಗ್ಗೆ ಗುಂಡಿನ ದಾಳಿ ನಡೆಸಿದ್ದು ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

Join Our Whatsapp Group

ಬೆಳಗ್ಗೆ ತಮ್ಮ ನಿವಾಸದ ಸಮೀಪ ವಾಯುವಿಹಾರ ಮಾಡುತ್ತಿದ್ದಾಗ ಈ ದಾಳಿ ನಡೆದಿದೆ.

ಪಂಕಜ್‌ ಯಾದವ್‌ ಅವರ ಎದೆ ಹಾಗೂ ಹೊಟ್ಟೆಯ ಭಾಗಕ್ಕೆ ಗುಂಡುಗಳು ತಗುಲಿವೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಪಂಕಜ್‌ ಮೇಲೆ ಗುಂಡು ಹಾರಿಸಿದವರು ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪಂಕಜ್‌ ಯಾದವ್‌ ಬಿಹಾರ ಆರ್‌ಜೆಡಿಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.