ಮನೆ ಅಪರಾಧ 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್: 30ಕ್ಕೂ ಹೆಚ್ಚು ಸಾವು

200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್: 30ಕ್ಕೂ ಹೆಚ್ಚು ಸಾವು

0

ಉತ್ತರಾಖಂಡ: ಮದುವೆ ದಿಬ್ಬಣ ಹೊರಟಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದು ಮೂವತ್ತಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ಉತ್ತರಾಖಂಡ್‌ನ ಪೌರಿ ಜಿಲ್ಲೆಯಲ್ಲಿ ಶುಕ್ರವಾರ(ಅ.4) ರಾತ್ರಿ ಸಂಭವಿಸಿದೆ.

Join Our Whatsapp Group

ಹರಿದ್ವಾರದ ಲಾಲ್‌ಧಾಂಗ್‌ನಿಂದ ಪೌರಿಯ ಬಿರೋನ್‌ಖಾಲ್ ಗ್ರಾಮಕ್ಕೆ ಮದುವೆ ಸಮಾರಂಭಕ್ಕೆ ಜನರನ್ನು ಕರೆದುಕೊಂಡು ಹೋಗುತಿತ್ತು ಎನ್ನಲಾಗಿದೆ ಶುಕ್ರವಾರ ರಾತ್ರಿ ಸುಮಾರು ಎಂಟು ಗಂಟೆಯ ಸುಮಾರಿಗೆ ಸಿಮಂಡಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಇನ್ನೂರು ಅಡಿ ಆಳದ ಕಂದಕಕ್ಕೆ ಬಿದ್ದಿದೆ ಎನ್ನಲಾಗಿದೆ, ಬಸ್ಸಿನಲ್ಲಿ ಸುಮಾರು ನಲ್ವತ್ತರಿಂದ ಐವತ್ತು ಮಂದಿ ಇದ್ದರು ಎನ್ನಲಾಗಿದ್ದು ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ರಕ್ಷಣಾ ತಂಡ ಧಾವಿಸಿದ್ದು ಘಟನೆಯಲ್ಲಿ ಎಷ್ಟು ಮಂದಿ ಮೃತಪಟ್ಟಿದ್ದಾರೆ ಎಂಬುದು ಇನ್ನೂ ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ ಆದರೆ ಕನಿಷ್ಠ ಮೂವತ್ತು ಮಂದಿ ಮೃತಪ್ಪಟ್ಟಿರುವುದಾಗಿ ಮಾಹಿತಿ ಲಭ್ಯವಾಗಿದೆ.

ವಧುವಿನ ಮನೆಯಿಂದ ಎರಡು ಕಿ.ಮೀ ದೂರದಲ್ಲೇ ಅಪಘಾತ:

ವಧುವಿನ ಮನೆಯಿಂದ ಎರಡು ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಜನರು ಪ್ರಾಣ ಉಳಿಸಿಕೊಳ್ಳುವಂತೆ ಕಿರುಚಿಕೊಂಡಿದ್ದಾರೆ ಘಟನೆ ನಡೆದ ವಿಚಾರ ಗೊತ್ತಾಗುತ್ತಿದ್ದಂತೆ ಅಕ್ಕಪಕ್ಕದ ಜನರು ರಕ್ಷಣೆಗಾಗಿ ಧಾವಿಸಿದ್ದಾರೆ, ಅಲ್ಲದೆ ಮಾಹಿತಿ ಪಡೆದ ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡವು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಇದಕ್ಕಾಗಿ ಸಮೀಪದ ಹಲವು ಠಾಣೆಗಳ ಪೊಲೀಸರನ್ನೂ ಕರೆಸಲಾಗಿದೆ. ಸರಿಯಾದ ಬೆಳಕಿನ ವ್ಯವಸ್ಥೆ ಇಲ್ಲದೆ ಕತ್ತಲೆಯಲ್ಲಿ ಟಾರ್ಚ್ ಮತ್ತು ಮೊಬೈಲ್ ಫೋನ್‌ಗಳ ಬೆಳಕಿನಲ್ಲಿ ರಕ್ಷಣಾ ಕಾರ್ಯವನ್ನು ಪ್ರಾರಂಭಿಸಲಾಯಿತು.

ಘಟನೆಯಲ್ಲಿ ಗಂಭೀರ ಗಯ್ಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.