ಮನೆ ದೇಶ ಯುಪಿಎಸ್ ಸಿ ಫಲಿತಾಂಶ ಪ್ರಕಟ: ಶ್ರುತಿ ಶರ್ಮಾ ಟಾಪರ್‌

ಯುಪಿಎಸ್ ಸಿ ಫಲಿತಾಂಶ ಪ್ರಕಟ: ಶ್ರುತಿ ಶರ್ಮಾ ಟಾಪರ್‌

0

ನವದೆಹಲಿ(New Delhi): ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವೆಗಳ (ಸಿಎಸ್‌ಇ) ಮುಖ್ಯ ಪರೀಕ್ಷೆ 2021 ರ ಫಲಿತಾಂಶವನ್ನು ಪ್ರಕಟಿಸಿದ್ದು, ಶ್ರುತಿ ಶರ್ಮಾ ಮೊದಲನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ.

ಈ ಬಾರಿಯ ಫಲಿತಾಂಶದಲ್ಲಿ ಮೊದಲ ನಾಲ್ಕು ಸ್ಥಾನಗಳನ್ನು ಹೆಣ್ಣುಮಕ್ಕಳೇ ಪಡೆದುಕೊಂಡಿದ್ದಾರೆ. ಶ್ರುತಿ ಶರ್ಮಾ, ಅಂಕಿತಾ ಅಗರ್ವಾಲ್, ಗಾಮಿನಿ ಸಿಂಗ್ಲಾ ಕ್ರಮವಾಗಿ ಮೊದಲ ಮೂರು ರ‍್ಯಾಂಕ್ ಗಳಿಸಿದ್ದಾರೆ.