ಮೈಸೂರು: ನಗರಾಭಿವೃದ್ಧಿ ಇಲಾಖೆಯ ವತಿಯಿಂದ ಮೈಸೂರು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬoಧಿಸಿದoತೆ ಇ-ಆಸ್ತಿ ತಂತ್ರಾoಶ ಮತ್ತು ಕಾವೇರಿ ತಂತ್ರಾoಶವನ್ನು ಸಂಯೋಜನೆ ಮಾಡಲಾಗುತ್ತಿದೆ.
ಇದಕ್ಕೆ ಸಂಬoಧಿಸಿದoತೆ ಮೈಸೂರು ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾoಶದಿoದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾoಶವನ್ನು ಕಾವೇರಿ-2. ತಂತ್ರಾoಶದೊoದಿಗೆ ಸಂಯೋಜನೆ ಮಾಡಲಾಗಿದ್ದು, ಮೈಸೂರು ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪ ನೋಂದಣಿ ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಲು ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾoಶದಿoದಲೇ ಪಡೆಯಬೇಕಾಗಿರುತ್ತದೆ.
ಇ-ಆಸ್ತಿ ಸಂಯೋಜನೆಯಿಂದ ಸಾರ್ವಜನಿಕರು ಸ್ವತ್ತುಗಳ ನೋಂದಣಿ ವೇಳೆ ಮೋಸ ಹೋಗುವುದನ್ನು ತಡೆಯುವುದು, ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯವಾಗುತ್ತದೆ, ನೈಜ ಮಾಲೀಕರಿಗೆ ವಂಚಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸುವುದು, ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸುವುದು, ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸಬಹುದಾಗಿದ್ದು, ಸಾರ್ವಜನಿಕರು ಇ-ಆಸ್ತಿ ಸಂಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿಯಾದ ಜಿ.ಲಕ್ಷ್ಮೀಕಾಂತ ರೆಡ್ದಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.